ನಾವು ತಪ್ಪು ಮಾಡಿದ್ದೇವೆ, ನನ್ನ ಹೇಳಿಕೆಗೆ ಈಗಲೂ ಬದ್ಧ: ಡಿಕೆ ಶಿವಕುಮಾರ್

ಬೆಂಗಳೂರು: ಪ್ರತ್ಯೇಕ ಲಿಂಗಾಯಿತ ಧರ್ಮ ವಿಚಾರಕ್ಕೆ ಕೈ ಹಾಕಿ ತಪ್ಪು ಮಾಡಿದ್ದೇವೆ ಎನ್ನುವ ಹೇಳಿಕೆಗೆ ನಾನು ಬದ್ಧನಾಗಿದ್ದು, ಪ್ರಜ್ಞಾ ಪೂರ್ವಕವಾಗಿಯೇ ಆತ್ಮಲೋಕನ ಮಾಡಿಕೊಂಡು ನಾನು ಹೇಳಿಕೆ ನೀಡಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಮರ್ಥನೆ ನೀಡಿದ್ದಾರೆ.

ಪತ್ಯೇಕ ಲಿಂಗಾಯತ ಧರ್ಮಕ್ಕೆ ವಿಚಾರಕ್ಕೆ ಕೈ ಹಾಕಿ ತಪ್ಪು ಮಾಡಿದ್ವಿ ಎನ್ನುವ ಹೇಳಿಕೆಗೆ ತಮ್ಮ ನಿವಾಸದಲ್ಲಿ ಪ್ರತಿಕ್ರಿಯಿಸಿದ ಅವರು, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಪ್ರಜ್ಞಾ ಪೂರ್ವಕವಾಯೇ ಆತ್ಮಾವಲೋಕನ ಮಾಡಿಕೊಂಡು ನಾನು ಹೇಳಿಕೆ ನೀಡಿದ್ದೇನೆ. ಯಾವತ್ತು ಧರ್ಮ, ಜಾತಿ ವಿಚಾರದಲ್ಲಿ ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಹಸ್ತಕ್ಷೇಪ ಮಾಡಬಾರದು. ರಾಜಕೀಯದಲ್ಲಿ ಧರ್ಮ ಇರಬೇಕೇ ಹೊರತು, ಧರ್ಮದಲ್ಲಿ ರಾಜಕೀಯ ಇರಬಾರದು ಎಂದು ತಮ್ಮ ಹೇಳಿಕೆಗೆ ಸಮರ್ಥಿಸಿಕೊಂಡರು.

ಈ ಬಗ್ಗೆ ಬೇರೆಯವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಿಲ್ಲ. ನನ್ನ ಮನಸ್ಸಿಗೆ ಅನ್ನಿಸಿದ್ದನ್ನು ನಾನು ಹೇಳಿದ್ದೇನೆ. ಹಿಂದಿನ ಸರ್ಕಾರ ಪ್ರತ್ಯೇಕ ಧರ್ಮ ಮಾಡುವಾಗ ನಾನು ಬೇಡವೆಂದು ಹೇಳಬೇಕಿತ್ತು. ಆದರೆ ಹಲವು ಸಚಿವರ ಅಭಿಪ್ರಾಯ ಪ್ರತ್ಯೇಕ ಧರ್ಮ ಬೇಕು ಎಂದು ಹೇಳಿದ್ದರು. ಹೀಗಾಗಿ ನಾನು ಅದಕ್ಕೆ ಬೆಂಬಲ ಸೂಚಿಸಿದ್ದೆ. ಯಾವುದೇ ಕಾರಣಕ್ಕೂ ಧರ್ಮದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು. ಅಂತಹ ಕೆಲಸ ಮಾಡಿ, ನಾವು ದೊಡ್ಡ ತಪ್ಪು ಮಾಡಿದ್ದೇವು ಪಶ್ಚಾತ್ತಾಪ ವ್ಯಕ್ತಪಡಿಸಿದರು. ಇದನ್ನೂ ಓದಿ: ಶಿವಕುಮಾರ್ Vs ಎಂಬಿ ಪಾಟೀಲ್ – ಕಾಂಗ್ರೆಸ್‍ನಲ್ಲಿ ಮತ್ತೆ ಧರ್ಮ ಯುದ್ಧ ಶುರು

ನನ್ನ ಹೇಳಿಕೆಯನ್ನು ತೆಗಳುವವರು ತೆಗಳಲಿ, ಮಾನನಷ್ಟ ಮೊಕದ್ದಮೆ ಹಾಕುವವರು ಹಾಕಲಿ, ಬೈಯುವವರು ಬೈಯಲಿ. ಯಾರು ಏನೇ ಅಂದರೂ, ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳುವುದಿಲ್ಲ ಎಂದು ಖಡಕ್ ಆಗಿಯೇ ತಿಳಿಸಿದರು.

ಬಳ್ಳಾರಿ ಚುನಾವಣೆ ಬಗ್ಗೆ ಮಾತನಾಡಿ, ನವೆಂಬರ್ 6ನೇ ತಾರೀಖಿನವರೆಗೂ ಕಾಯೋಣ, ಶ್ರೀರಾಮುಲು ಅಣ್ಣನವರು ಕನಕಪುರದ ಗೌಡರಿಗೇನು ಕೆಲಸ ಎಂದು ಹೇಳುತ್ತಿದ್ದಾರೆ. ಅವರನ್ನು ನಾನೇಕೆ ತುಳಿಯೋಕೆ ಹೋಗೋಣ. ಅವರನ್ನು ಬೇಕಾದರೆ ಹೆಗಲ ಮೇಲೆ ಕೂಡಿಸಿಕೊಂಡು ಹೋಗುತ್ತೇನೆ ಎಂದು ಹೇಳಿದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *