ಲಕ್ನೋ: 45 ವರ್ಷದ ಸಾಧು ಒಬ್ಬರು ಬ್ಲೇಡ್ನಿಂದ ತಮ್ಮ ಮರ್ಮಾಂಗವನ್ನು ಕತ್ತರಿಸಿಕೊಂಡಿರುವ ವಿಚಿತ್ರ ಘಟನೆ ಉತ್ತರ ಪ್ರದೇಶ ರಾಜ್ಯದ ಬಾಂದಾ ಜಿಲ್ಲೆಯ ಕಾಮಸಿನ್ ನಗರದಲ್ಲಿ ನಡೆದಿದೆ.
ಮದನಿ ಬಾಬಾ ಮರ್ಮಾಂಗ ಕತ್ತರಿಸಿಕೊಂಡ ಸಾಧು. ಮದನಿ ಬಾಬಾ ಕಳೆದ ಹಲವು ವರ್ಷಗಳಿಂದ ಕಾಮಸಿನ್ ನಗರದ ಸರ್ಕಾರಿ ನಿವೇಶನದಲ್ಲಿ ಗುಡಿಸಲು ಹಾಕಿಕೊಂಡು ಜೀವನ ನಡೆಸುತ್ತಿದ್ದರು. ಗುರುವಾರ ನಗರದ ಕೆಲ ಮಹಿಳೆಯರು ಸಾಧು ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಆರೋಪದಿಂದ ಮನನೊಂದು ಸಾಧು ರಾತ್ರಿ ಬ್ಲೇಡ್ ನಿಂದ ಮರ್ಮಾಂಗವನ್ನು ಕತ್ತರಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರೇಪಿಸ್ಟ್ ಕಾಮಿ ಸ್ವಾಮೀಜಿಯ ಮರ್ಮಾಂಗವನ್ನೇ ಕಟ್ ಮಾಡಿದ್ಳು ಯುವತಿ!

ಮದನಿ ಬಾಬಾರನ್ನ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದೇಹದಿಂದ ಮರ್ಮಾಂಗ ಶೇ.80 ರಷ್ಟು ಬೇರೆಯಾಗಿದೆ. ಸದ್ಯ ಸಾಧು ಅವರ ಆರೋಗ್ಯ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾಧು ಮದನಿ ಬಾಬಾರಿಗೆ ಮಾನಸಿಕವಾಗಿ ಕಿರುಕುಳ ನೀಡಿದ ಆರೋಪದ ಮೇರೆಗೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಯುವತಿ ಅಲ್ಲ, ನನ್ನ ಮರ್ಮಾಂಗವನ್ನು ನಾನೇ ಕತ್ತರಿಸಿದೆ: ಕಾಮಿ ಸ್ವಾಮೀಜಿ
2017ರಲ್ಲಿ ರಾಜಸ್ಥಾನದ 30 ವರ್ಷದ ಸ್ವಯಂಘೋಷಿತ ದೇವಮಾನವ ಸಂತೋಷ್ ದಾಸ್ ಅಕ್ರಮ ಸಂಬಂಧದ ಆರೋಪಕ್ಕೆ ಮನನೊಂದು ಮರ್ಮಾಂಗವನ್ನು ಕಟ್ ಮಾಡಿಕೊಂಡಿದ್ದ ಘಟನೆ ನಡೆದಿತ್ತು. ಕೇರಳದಲ್ಲಿ 23 ವರ್ಷದ ಕಾನೂನು ವಿದ್ಯಾರ್ಥಿನಿಯ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀ ಹರಿ ಅಲಿಯಾಸ್ ಗಣೇಶಾನಂದ ತೀರ್ಥಪಾದ ಸ್ವಾಮಿ ಮರ್ಮಾಂಗ ಕತ್ತರಿಸಿಕೊಂಡಿದ್ದ ಪ್ರಕರಣ ದೇಶಾದ್ಯಂತ ಸದ್ದು ಮಾಡಿತ್ತು. ಇದನ್ನೂ ಓದಿ: ಅಕ್ರಮ ಸಂಬಂಧ ಆರೋಪಕ್ಕೆ ಮನನೊಂದು ಸ್ವಾಮೀಜಿ `ಅದನ್ನೇ’ ಕಟ್ ಮಾಡ್ಕೊಂಡ!
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply