ವಿದೇಶಕ್ಕೆ ಚಿಪ್ಪು ಹಂದಿ ಸಾಗಾಟ ಯತ್ನ-ಇಬ್ಬರ ಬಂಧನ

ಮೈಸೂರು: ವಿದೇಶಕ್ಕೆ ಚಿಪ್ಪು ಹಂದಿ ಸಾಗಿಸಲು ಪ್ಲಾನ್ ಮಾಡಿದ್ದ ಇಬ್ಬರನ್ನು ಸಿನಿಮೀಯ ಶೈಲಿಯಲ್ಲಿ ಮೈಸೂರಿನ ಅರಣ್ಯ ಸಂಚಾರದಳ ತಂಡ ಬಂಧಿಸಿದೆ.

ಕನಕಪುರದ ಅನಿಲ್ ಕುಮಾರ್ (40) ಹಾಗೂ ಬೆಂಗಳೂರಿನ ಇನಾಯತ್ (36) ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಅರಣ್ಯ ಸಂಚಾರದಳದ ಡಿಸಿಎಫ್ ಪೂವಯ್ಯ ನೇತೃತ್ವದ ತಂಡ ಮಾರುವೇಷದಲ್ಲಿ ತೆರಳಿ ಆರೋಪಿಗಳನ್ನು ಮಂಡ್ಯ ಜಿಲ್ಲೆಯ ಹಲಗೂರು ಬಳಿ ಬಂಧಿಸಿದ್ದಾರೆ.

ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಕಾರ್ ಹಾಗೂ ಜೀವಂತ ಚಿಪ್ಪುಹಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗದ ಬಳಿ ಚಿಪ್ಪುಹಂದಿ ಸೆರೆಹಿಡಿದಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಚಿಪ್ಪು ಹಂದಿ ಮನೆಯಲ್ಲಿದ್ದರೆ ಸಂಪತ್ತು ಹೆಚ್ಚಾಗುತ್ತದೆ ಎನ್ನುವ ನಂಬಿಕೆ ಹಾಗೂ ಚಿಪ್ಪು ಹಂದಿ ಮಾಂಸ, ವಿದೇಶಗಳಲ್ಲಿ ಬಹಳ ಬೇಡಿಕೆ ಹಿನ್ನಲೆ ವಿದೇಶಕ್ಕೆ ರವಾನಿಸಲು ಆರೋಪಿಗಳು ಪ್ಲಾನ್ ಮಾಡಿದ್ದರು ಎಂಬ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *