ಬೆಂಗಳೂರು: ರಾಮನಗರ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಚುನಾವಣಾ ಕಣದಿಂದ ಹಿಂದೆ ಸರಿದಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ನಟ, ಮಾಜಿ ಸಚಿವ ಅಂಬರೀಶ್ ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿ ಹಿಂದೆಸರಿದಿರುವ ಬಗ್ಗೆ ಕರ್ನಾಟಕ ಚಲನಚಿತ್ರ ಮಂಡಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಚುನಾವಣೆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಬಿಜೆಪಿ ಅಭ್ಯರ್ಥಿ ಚುನಾವಣಾ ಕಣದಿಂದ ಹಿಂದೆ ಸರಿದಿರುವ ಬಗ್ಗೆ ಮಾಹಿತಿ ಇಲ್ಲ. ಉಪ ಚುನಾವಣೆ 2 ದಿನ ಇರುವಾಗ ಚುನಾವಣಾ ಕಣದಿಂದ ಹಿಂದೆ ಸರಿದಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ರಾಜಕೀಯ ಜೀವನದಲ್ಲಿ ಇಂತಹ ವಾತಾವರಣ ಒಳ್ಳೆಯ ಬೆಳವಣಿಗೆಯನ್ನು ಸೂಚಿಸುವುದಿಲ್ಲ. ಅಲ್ಲದೇ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಾಗಿ ಅವರು ಕಣದಿಂದ ಹಿಂದೆ ಸರಿದಿರುವುದು ಇದೇ ಮೊದಲು ಎಂದು ಹೇಳಿದರು.

ಮಂಡ್ಯದಲ್ಲಿ ಜೆಡಿಎಸ್ ಬೆಂಬಲ ಕುರಿತು ಪ್ರಶ್ನಿಸಿದಾಗ, ಮಂಡ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಈಗ ಎರಡೂ ಒಂದೇ, ಸಮ್ಮಿಶ್ರ ಸರ್ಕಾರದ ಪರ ಅಭ್ಯರ್ಥಿಯಾಗಿ ಒಬ್ಬರೇ ಚುನಾವಣೆಗೆ ಸ್ಪರ್ಧಿಸಿದ್ದಾರೆ ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply