ರಾಮನಗರ: ಇಲ್ಲಿನ ಅಭ್ಯರ್ಥಿ ಎಲ್ ಚಂದ್ರಶೇಖರ್ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಇದೀಗ ಜಿಲ್ಲಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನಿಡಲು ಮುಂದಾಗಿದ್ದಾರೆ.
ಹೌದು. ರಾಮನಗರ ಬಿಜೆಪಿ ಜಿಲ್ಲಾದ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ರುದ್ರೇಶ್ ಮುಂದಾಗಿದ್ದಾರೆ. ಪಕ್ಷದ ನಾಯಕರ ಸಹವಾಸ ಸಾಕಾಗಿದೆ. ರಾಜೀನಾಮೆ ತೀರ್ಮಾನಕ್ಕೆ ಬಂದಿದ್ದೇನೆ. ನಾಳೆ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನು ತಿಳಿಸುತ್ತೇನೆ ಅಂತ ಹೇಳಿದ್ದಾರೆ. ಇದನ್ನೂ ಓದಿ: ಉಪಚುನಾವಣೆಗೆ ಸ್ಫೋಟಕ ಟ್ವಿಸ್ಟ್-ಚುನಾವಣೆ ಕಣದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

ಅಲ್ಲದೇ ಕಾರ್ಯಕರ್ತರ ಹಾಗೂ ಮುಖಂಡರ ನಡುವಿನ ಭಿನ್ನಾಭಿಪ್ರಾಯದಿಂದ ಬೇಸರವಾಗಿದೆ. ಚುನಾವಣೆಯಲ್ಲಿ ಅಭ್ಯರ್ಥಿ ದಿಢೀರ್ ಕೈ ಕೊಟ್ಟು ಮತ್ತೆ ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ರುದ್ರೇಶ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://www.youtube.com/watch?v=SUz3348T4QA

Leave a Reply