ತುಮಕೂರು: ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿ ಸೋಮವಾರ ರಾತ್ರಿ ವೇಳೆ ಮೆಡಿಕಲ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಔಷಧಿಗಳೆಲ್ಲಾ ಸಂಪೂರ್ಣ ಸುಟ್ಟು ಹೋಗಿದೆ.

ಪಟ್ಟನಾಯಕನಹಳ್ಳಿಯ ಮಂಜುನಾಥ್ ಎಂಬುವವರ ಮೆಡಿಕಲ್ನಲ್ಲಿ ಅಗ್ನಿ ಅವಘಡವಾಗಿದೆ. ಆಕಸ್ಮಿಕ ಅನಾಹುತದಿಂದ ಮೆಡಿಕಲ್ನಲ್ಲಿದ್ದ ಔಷಧಿಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಸುಮಾರು 10 ಲಕ್ಷ ರೂ. ಮೌಲ್ಯದ ಔಷಧಿಗಳು ಸುಟ್ಟು ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನೆ ಕುರಿತು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್ಬುಕ್ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Leave a Reply