ತುಮಕೂರು: ಜಿಲ್ಲೆಯ ಯಲ್ಲಾಪುರದ ಮಡಿಕಲ್ ಸ್ಟೋರೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಔಷಧಿಗಳು ಹಾಗೂ ಪೀಠೋಪಕರಣಗಳು ಬೆಂಕಿಗಾಹುತಿಯಾಗಿದೆ.

ಬಾಲಾಜಿ ಮೆಡಿಕಲ್ ಸ್ಟೋರ್ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡ ಪರಿಣಾಮ ಮೆಡಿಕಲ್ನಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸುಮಾರು 5 ಲಕ್ಷ ರೂ. ಮೌಲ್ಯದ ಔಷಧಿಗಳು ಸೇರಿದಂತೆ 10 ಲಕ್ಷ ರೂಪಾಯಿಗೂ ಹೆಚ್ಚು ಬೆಲೆಬಾಳುವ ಪೀಠೋಪಕರಣಗಳು ಸುಟ್ಟು ಕರಕಲಾಗಿದೆ. ಮೆಡಿಕಲ್ಗೆ ಹೊತ್ತಿಕೊಂಡಿದ್ದ ಬೆಂಕಿ ತೀವ್ರಗೊಂಡ ಪರಿಣಾಮ ಪಕ್ಕದಲ್ಲಿದ್ದ ಕ್ಲಿನಿಕ್ಗೂ ಬೆಂಕಿ ತಗುಲಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

ಘಟನೆ ಕುರಿತು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅನಾಹುತಕ್ಕೆ ಕಾರಣವೇನು ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್ಬುಕ್ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Leave a Reply