3 ತಿಂಗ್ಳ ಹಿಂದೆ ಗ್ಯಾಂಗ್‍ರೇಪ್, ಈಗ ವಿಡಿಯೋ ವೈರಲ್ – ಆರೋಪಿಗಳು ಅರೆಸ್ಟ್

ಪಾಟ್ನಾ: ಸಾಮಾಜಿಕ ಜಾಲತಾಣಗಳಲ್ಲಿ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ವಿಡಿಯೋ ವೈರಲ್ ಆಗಿದ್ದು, ಬಳಿಕ ಬಿಹಾರ್ ಪೊಲೀಸರು ಮೂವರು ಕಾಮುಕರನ್ನು ಬಂಧಿಸಿದ್ದಾರೆ.

ರಾಹುಲ್ ಕುಮಾರ್, ರಮೇಶ್ ವಿಶ್ವಕರ್ಮ ಮತ್ತು ಅಂಕಿತ್ ಕುಮಾರ್ ಬಂಧಿತ ಆರೋಪಿಗಳು. ಈ ಘಟನೆ ಬಿಹಾರದ ನವಾಡಾ ಜಿಲ್ಲೆಯ ನಾರತ್ ಗ್ರಾಮದಲ್ಲಿ ಸುಮಾರು ಮೂರು ತಿಂಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಐವರು ಆರೋಪಿಗಳು ಸಂತ್ರಸ್ತೆಯನ್ನು ಕೋಚಿಂಗ್ ತರಬೇತಿಗೆ ಹೋಗಿದ್ದಾಗ ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ.

ಸಂತ್ರಸ್ತೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಲ್ಲದೇ ಅದನ್ನು ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ನಂತರ ಆರೋಪಿಗಳು ಸಂತ್ರಸ್ತೆಯ ಮೇಲೆ ಹಲ್ಲೆ ಮಾಡಿ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಸದ್ಯ ಅತ್ಯಾಚಾರದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೀಗಾಗಿ ವಿಡಿಯೋ ಮೂಲಕ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಆರೋಪಿಗಳು 3 ತಿಂಗಳುಗಳಿಂದ ಪದೇಪದೇ ಬೆದರಿಕೆ ಒಡ್ಡಿ, ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಅಮೃತೆಂಡು ಶೇಖರ್ ಠಾಕೂರ್ ಹೇಳಿದ್ದಾರೆ.

ಆರೋಪಿಗಳು ಮತ್ತೆ ಭಾನುವಾರ ಸಂತ್ರಸ್ತೆಯನ್ನು ಕರೆದಿದ್ದಾರೆ. ಆದರೆ ಸಂತ್ರಸ್ತೆ ಹೋಗಲು ನಿರಾಕರಿಸಿದ್ದಾಳೆ. ಆದ್ದರಿಂದ ಕಾಮುಕರು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿದ್ದಾರೆ. ಬಳಿಕ ಸಂತ್ರಸ್ತೆಯ ಕುಟುಂಬದವರು ಸ್ಥಳೀಯ ಪೊಲೀಸರನ್ನು ಭೇಟಿ ನೀಡಿ ಈ ಕುರಿತು ದೂರು ಸಲ್ಲಿಸಿದ್ದಾರೆ.

ಸದ್ಯಕ್ಕೆ ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ನಾವು ಪ್ರಕರಣವನ್ನು ತನಿಖೆ ಮಾಡುತ್ತಿದ್ದು, ಸಂತ್ರಸ್ತೆ ಸಲ್ಲಿಸಿದ ದೂರಿನ ಆಧಾರದ ಮೇರೆಗೆ ಮೂವರನ್ನು ಬಂಧಿಸಿದ್ದೇವೆ. ಬಂಧಿತ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಇಬ್ಬರು ಆರೋಪಿಗಳಾಗಿ ಶೋಧಕಾರ್ಯ ನಡೆಸುತ್ತಿದ್ದೇವೆ ಎಂದು ಠಾಕೂರ್ ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *