ಪ್ರಧಾನಿಯನ್ನು ಹೊಗಳಲು ಹೋಗಿ ಜೆಡಿಎಸ್ ನಾಯಕರ ಕೆಂಗಣ್ಣಿಗೆ ಗುರಿಯಾದ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ

ಹಾಸನ: 100 ಮಂದಿ ದೇವೇಗೌಡರು, ಕುಮಾರಸ್ವಾಮಿ ಹಾಗೂ ರೇವಣ್ಣನಂತವರು ಬಂದರೂ, ಪ್ರಧಾನಿ ನರೇಂದ್ರ ಮೋದಿಯವರ ಕೂದಲು ಅಲ್ಲಾಡಿಸಲು ಸಾಧ್ಯವಿಲ್ಲವೆಂದು ಬಿಜೆಪಿ ಜಿಲ್ಲಾಧ್ಯಕ್ಷ ಯೋಗ ರಮೇಶ್ ಹೇಳಿಕೆಯನ್ನು ನೀಡುವ ಮೂಲಕ ಜೆಡಿಎಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಲಘುವಾಗಿ ಮಾತನಾಡಿದ್ದ ಲೋಕೋಪಯೋಗಿ ಸಚಿವ ರೇವಣ್ಣನವರಿಗೆ ಮಾನ ಮರ್ಯಾದೆ ಇಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ, ಅವನ ಮನೆಯ ಹತ್ತಿರ ಫೈಲುಗಳನ್ನು ಹಿಡಿದಿಕೊಂಡು ಓಡಾಡುತ್ತಿದ್ದರು. ಈಗ ಅವರು ಹಿರಿಯರೆನ್ನದೆ ಲಘುವಾಗಿ ಮಾತನಾಡಿದ್ದಾರೆ. ಅಲ್ಲದೇ ಸಿದ್ದರಾಮಯನ್ನವರು ಮುಖ್ಯಮಂತ್ರಿಯಾಗಿದ್ದಾಗ, ದೇವೇಗೌಡರು ಹಾಗೂ ಕುಮಾರಸ್ವಾಮಿಗಳು ಅವರಿಗೆ ಬೈಯುತ್ತಿದ್ದರೇ, ಇವರು ಫೈಲ್ ಹಿಡಿದುಕೊಂಡು ಅವರ ಹತ್ತಿರ ಹೋಗುತ್ತಿದ್ದರು ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ತೃತಿಯ ರಂಗ ವಿಚಾರದ ಕುರಿತು ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ಬೇರೆ ಬೇರೆ ರಾಜ್ಯದ ಮುಖ್ಯಮಂತ್ರಿಗಳನ್ನು ಕರೆಸಿ, ತೃತೀಯ ರಂಗದ ಕುರಿತು ಮಾತನಾಡುತ್ತಿದ್ದಾರೆ. ಅಲ್ಲದೇ ದೇವೇಗೌಡರು, ಸಿಎಂ ಕುಮಾರಸ್ವಾಮಿ ಹಾಗೂ ರೇವಣ್ಣನಂತವರ ನೂರು ಜನ ಬಂದರು, ಪ್ರಧಾನಿ ನರೇಂದ್ರ ಮೋದಿಯವರ ಕೂದಲನ್ನು ಅಲ್ಲಾಡಿಸಲು ಸಾಧ್ಯವಾಗಲ್ಲ ಎಂದು ಕಿಡಿಕಾರಿದ್ದಾರೆ.

ಹಾಸನ ಜಿಲ್ಲೆಯಲ್ಲಿದ್ದ ಸಕ್ಕರೆ ಕಾರ್ಖಾನೆಯನ್ನು ಮುಚ್ಚಿದ ಕೀರ್ತಿ ರೇವಣ್ಣ ನವರಿಗೆ ಸಲ್ಲುತ್ತದೆ. ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಅವರು ಏನು ಮಾಡಿದ್ದಾರೆನ್ನುವುದನ್ನು ಮೊದಲು ತಿಳಿಸಲಿ. ಅದನ್ನು ಬಿಟ್ಟು ಉತ್ತರ ಕರ್ನಾಟಕದ ಕಬ್ಬು ಬೆಳಗಾರರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ನಿಮ್ಮ ಕೈಯಲ್ಲಿ ಅಧಿಕಾರವಿದ್ದಾಗ ಯಾವ ರೀತಿ ದಬ್ಬಾಳಿಕೆ ನಡೆಸಿದ್ದೀರಿ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *