ಸಕಲ ಸರ್ಕಾರಿ ಗೌರವಗಳೊಂದಿಗೆ ಜಾಫರ್ ಶರೀಫ್‍ಗೆ ವಿದಾಯ

ಬೆಂಗಳೂರು: ಕೇಂದ್ರ ಮಾಜಿ ಸಚಿವ ಜಾಫರ್ ಶರೀಫ್‍ ಅವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಇಂದು ಅಂತಿಮ ನಮನ ಸಲ್ಲಿಸಲಾಯಿತ್ತು.

ಇಂದು ಬೆಳಗ್ಗೆ ಜಾಫರ್ ಶರೀಫ್ ನಿವಾಸದಿಂದ ಹೊರಟ ಅವರ ಪಾರ್ಥಿಕ ಶರೀರವನ್ನು ಕೆಪಿಸಿಸಿ ಕಚೇರಿಯಲ್ಲಿ ಕೆಲಕಾಲ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಈ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗೂಂಡುರಾವ್ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗುಲಾಂ ನಬಿ ಅಜಾದ್ ಸೇರಿದಂತೆ ಮುಸ್ಲಿಂ ಸಮುದಾಯದ ಹಲವು ಮುಖಂಡರು ಅಂತಿಮ ದರ್ಶನ ಪಡೆದರು.

ಬಳಿಕ ಮೆರವಣಿಗೆಯಲ್ಲಿ ಕೊಂಡ್ಯೊಯುದು ಸಕಲ ಸರ್ಕಾರಿ ಗೌರವನ್ನು ಸಲ್ಲಿಸಲಾಯಿತು. ನಗರದ ನಂದಿದುರ್ಗ ರಸ್ತೆಯಲ್ಲಿರುವ ಜುಮ್ಮಾ ಮಸೀದಿಯಲ್ಲಿ ಮುಸ್ಲಿಂ ಸಾಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು. ನಂತರ ಮಸೀದಿಯಿಂದ ಮೆರವಣಿಗೆ ಮೂಲಕ ಮಿಲ್ಲರ್ಸ್ ರಸ್ತೆಯಲ್ಲಿರುವ ಖಬರಸ್ತಾನ ಸ್ಮಶಾನಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಯಿತ್ತು. ಅಂತ್ಯಕ್ರಿಯೆಯಲ್ಲಿ ಶಾಸಕ ಹ್ಯಾರೀಸ್, ರೋಷನ್‍ಬೇಗ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಜಾಫರ್ ಷರೀಫ್ ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *