ಕಾಂಗ್ರೆಸ್ ಅತೃಪ್ತಿ ಹಿಂದಿದ್ಯಾ ಶಾಸಕ ಡಾ.ಸುಧಾಕರ್ ಕೈವಾಡ?

ಬೆಂಗಳೂರು: ಕಾಂಗ್ರೆಸ್‍ನಲ್ಲಿ ಮತ್ತೆ ಬಿರುಕು ಭಿನ್ನಮತ ಹೊಗೆಯಾಡುತ್ತಿದ್ದು, ಕಾಂಗ್ರೆಸ್ ಅತೃಪ್ತರ ಹಿಂದೆ ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಕೈವಾಡ ಇದೆ ಎಂದು ಶಾಸಕ ವಿರುದ್ಧವೇ ಹೈಕಮಾಂಡ್‍ಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಶಾಸಕ ಡಾ. ಸುಧಾಕರ್ ಅವರು ನಮ್ಮ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದ್ದಾರೆ. 2 ದಿನಗಳ ಹಿಂದೆ ಸಚಿವ ಸ್ಥಾನ ಆಕಾಂಕ್ಷಿ ಶಾಸಕರನ್ನ ಸುಧಾಕರ್ ಮನೆಗೆ ಅಹ್ವಾನಿಸಿದ್ದರು. ಇದಕ್ಕೆ ಮಣೆ ಹಾಕಿರಲಿಲ್ಲ. ಹೀಗಾಗಿ ಅತೃಪ್ತ ಶಾಸಕರು ಮುಂಬೈಗೆ ಹೋಗುತ್ತಿದ್ದಾರೆ ಎಂದು ಸುಧಾಕರ್ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ ಎಂದು ಶಾಸಕರಾದ ಬಿ.ಸಿ ಪಾಟೀಲ್, ಎಂಟಿಬಿ ನಾಗರಾಜ್, ಸಂಗಮೇಶ್ ಕಿಡಿಕಾರಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಸುಧಾಕರ್ ಅವರ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರಲ್ಲಿ ಶಾಸಕರು ದೂರು ನೀಡಿದ್ದು, ಈ ಬೆನ್ನಲ್ಲೇ ಹೈಕಮಾಂಡ್ ಸುಧಾಕರ್ ಅವರಿಗೆ ಕರೆ ಮಾಡಿದ ಇಬ್ಬರೂ ನಾಯಕರು ತರಾಟೆಗೆ ತೆಗೆದುಕೊಂಡಿದ್ದು, ತಪ್ಪು ತಿದ್ದಿಕೊಳ್ಳಿ ಇಲ್ಲವೇ ನಾವೇ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಈ ನಡುವೆ ಯಾರು ಎಲ್ಲಿಗಾದರು ಹೋಗಲಿ ಡಿಸೆಂಬರ್ 10 ರೊಳಗೆ ಸಂಪುಟ ವಿಸ್ತರಣೆ ಆಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಸಿದರು. ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆಯನ್ನ ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *