ಮುಂಬೈ: ಬಾಲಿವುಡ್ ಹಾಟ್ ನಟಿ ದಿಶಾ ಪಠಾಣಿ ಇಂಗ್ಲಿಷ್ ಹಾಡಿಗೆ ಹೆಜ್ಜೆ ಹಾಕಿ ವಿಡಿಯೋವೊಂದನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ದಿಶಾ ಪಠಾಣಿ ಸಿನಿಮಾಗಳಲ್ಲಿ ಹೆಚ್ಚು ನಟಿಸದಿದ್ದರೂ, ಸಾಮಾಜಿಕ ಜಾಲತಾಣದ ಮೂಲಕ ತನ್ನ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರುತ್ತಾರೆ. ಸದ್ಯ ಈಗ ಅವರು ಇಂಗ್ಲಿಷ್ ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋವೊಂದನ್ನು ಇನ್‍ಸ್ಟಾಗ್ರಾಂನಲ್ಲಿ ಕೆಲವು ಗಂಟೆಗಳ ಹಿಂದೆ ಹಂಚಿಕೊಂಡಿದ್ದಾರೆ.
View this post on Instagram
#FEFE choreography @moonlightt_____________ ❤️❤️???? @nickiminaj ????????
‘ಭಾಗಿ-2’ ಚಿತ್ರದ ನಂತರ ದಿಶಾ ಸಲ್ಮಾನ್ ಖಾನ ನಟನೆಯ ‘ಭಾರತ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಬ್ಯುಸಿ ಶೂಟಿಂಗ್ ನಡುವೆಯೂ ದಿಶಾ ಪಠಾಣಿ ತನ್ನ ಕೋರಿಯೋಗ್ರಾಫರ್ ಜೊತೆ ಇಂಗ್ಲಿಷ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ.
ಸದ್ಯ ದಿಶಾ ಭಾರತ್ ಚಿತ್ರದಲ್ಲಿ ಬ್ಯುಸಿಯಾಗಿದ್ದು, ಈ ಚಿತ್ರದಲ್ಲಿ ಅವರು ಆ್ಯಕ್ಷನ್ ಸೀನ್ ಮಾಡುತ್ತಿದ್ದಾರೆ. ಈ ಚಿತ್ರದ ಆ್ಯಕ್ಷನ್ ಸೀನ್‍ಗಾಗಿ ದಿಶಾ ಪಠಾಣಿ ಪ್ರ್ಯಾಕ್ಟಿಸ್ ಮಾಡುತ್ತಿರುವ ವಿಡಿಯೋವನ್ನು ಕೂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ದೀಪಾವಳಿ ಹಬ್ಬಕ್ಕಾಗಿ ದಿಶಾ ಗೋಲ್ಡನ್ ಲೆಹೆಂಗಾ ಧರಿಸಿ ಅದಕ್ಕೆ ಒಳಉಡುಪು ಹಾಕಿ ಕೈಯಲ್ಲಿ ದೀಪ ಹಿಡಿದು ಫೋಟೋಗೆ ಪೋಸ್ ನೀಡಿದ್ದರು. ಹೋಟೆಲ್‍ನ ರೂಂವೊಂದರಲ್ಲಿ ದಿಶಾ ಫೆಸ್ಟಿವ್ ಲುಕ್‍ನಲ್ಲಿ ಈ ರೀತಿ ಫೋಟೋಶೂಟ್ ಮಾಡಿಸಿದ್ದರು. ಲೆಹೆಂಗಾಗೆ ದಿಶಾ ಹಣೆಗೆ ಬೈತಲೆ ಬೊಟ್ಟು ಹಾಕಿದ್ದರು. ಸದ್ಯ ದಿಶಾ ಅವರ ಆ ಫೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply