ಬೆತ್ತಲೆ ಫೋಟೋ, ವಿಡಿಯೋ ಇಟ್ಕೊಂಡು 2 ವರ್ಷ ರೇಪ್ ಮಾಡಿ 35 ಲಕ್ಷಕ್ಕೆ ಬೇಡಿಕೆ ಇಟ್ಟ!

ಮುಂಬೈ: ಪತಿಯನ್ನು ಜೈಲಿನಿಂದ ಬಿಡುಗಡೆ ಮಾಡಿಸಲು ಸಹಾಯ ಮಾಡುತ್ತೇನೆ ಎಂದು ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ನಿರಂತರ ಅತ್ಯಾಚಾರ ಎಸಗಿದ್ದು, ಜೊತೆಗೆ ಬ್ಲ್ಯಾಕ್ ಮೇಲೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಬಾರಾಮತಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ವಿರುದ್ಧ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಯನ್ನು ಮಚ್ಚಿಂದ್ರ ಶಂಕರ್ ಟಿಂಗ್ರೆ ಎಂದು ಗುರುತಿಸಲಾಗಿದೆ. ಈತ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದು, ಆಕೆಯ ನಗ್ನ ಫೋಟೋ ಮತ್ತು ವಿಡಿಯೋಗಳನ್ನು ತೆಗೆದುಕೊಂಡಿದ್ದಾನೆ. ಅಷ್ಟೇ ಅಲ್ಲದೇ ಬೆತ್ತಲೆ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಬೆದರಿಸಿದ್ದು, ಒಂದು ವೇಳೆ ಹಣ ಕೊಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.

ಸಂತ್ರಸ್ತೆಯ ಪತಿ, ತಂದೆ ಮತ್ತು ಸಹೋದರಿಯ ಕೊಲೆಯ ಆರೋಪದ ಮೇಲೆ ಜೈಲು ಶಿಕ್ಷೆಗೆ ಒಳಗಾಗಿದ್ದಾನೆ. ಆರೋಪಿ ಟಿಂಗ್ರೆ ಸಂತ್ರಸ್ತೆಗೆ ಪತಿಯನ್ನು ಜೈಲಿನಿಂದ ಬಿಡುಗಡೆ ಮಾಡಲು ಸಹಾಯ ಮಾಡುತ್ತೇನೆ ಎಂದು ಪ್ರಮಾಣ ಮಾಡಿದ್ದಾನೆ. ಪತಿಯನ್ನು ಜೈಲಿನಿಂದ ಬಿಡಿಸುತ್ತಾನೆಂದು ನಂಬಿದ್ದ ಸಂತ್ರಸ್ತೆಯನ್ನು ಆತ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅತ್ಯಾಚಾರ ನಂತರ ಈ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನನ್ನು ಮತ್ತು ನಿನ್ನ ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆರೋಪಿ ಸತತ 2 ವರ್ಷಗಳಿಂದ ಪದೇ ಪದೇ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೇ ಒಂದು ವೇಳೆ ಸಂತ್ರಸ್ತೆ ಲೈಂಗಿಕ ಸಂಬಂಧವನ್ನು ಮುಂದುವರಿಸಲು ನಿರಾಕರಿಸಿದರೆ ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ನಗ್ನ ಫೋಟೋ, ವೀಡಿಯೊಗಳನ್ನು ಅಪ್ಲೋಡ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

10 ದಿನಗಳ ದಿನಗಳ ನಂತರ ಮಹಿಳೆಯ ಸ್ನೇಹಿತರು ನಿನ್ನ ಬೆತ್ತಲೆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದು ತಿಳಿಸಿದ್ದಾರೆ. ಆಗ ಆರೋಪಿ ತನ್ನ ಫೋಟೋಗಳನ್ನು ಅಪ್ಲೋಡ್ ಮಾಡಿದ್ದಾನೆ ಎಂದು ತಿಳಿದು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *