ಹಾಸನ: ನವವಿವಾಹಿತೆಯ ಶವ ಕಾಲುವೆಯಲ್ಲಿ ಪತ್ತೆಯಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕತ್ತರಿಘಟ್ಟ ಗ್ರಾಮದಲ್ಲಿ ನಡೆದಿದೆ.
ಆಶಾ(21) ಕಾಲುವೆಯಲ್ಲಿ ಶವವಾಗಿ ಪತ್ತೆಯಾದ ನವವಿವಾಹಿತೆ. ಆಶಾ ಹಾಸನ ತಾಲೂಕಿನ ಹೆರಗು ಗ್ರಾಮದ ಚಂದ್ರಪ್ಪ ಎಂಬವರ ಪುತ್ರಿಯಾಗಿದ್ದು ಕಳೆದ ಮೂರು ತಿಂಗಳ ಹಿಂದೆಯಷ್ಟೇ ಜೆಸಿಬಿ ಚಾಲಕ ಮಹೇಶ್ ಗೆ ಮದುವೆ ಮಾಡಿಕೊಡಲಾಗಿತ್ತು.

ಇದೀಗ ಆಶಾ ಶವವಾಗಿ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳ ನೀಡಿ ಆಶಾಳನ್ನು ಕೊಲೆ ಮಾಡಿದ್ದಾರೆ ಎಂದು ಆಕೆಯ ಪೋಷಕರು ಆರೋಪಿಸುತ್ತಿದ್ದಾರೆ. ಹೀಗಾಗಿ ಮೃತಳ ಪತಿ ಮನೆಯವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಬಗ್ಗೆ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply