ಸಚಿವ ಪುಟ್ಟರಂಗಶೆಟ್ಟಿಗೆ ಸಿದ್ದರಾಮಯ್ಯ ಕ್ಲಾಸ್..!

– ಪ್ರತಿಭಟನೆಗೆ ಬಿಜೆಪಿ ಕರೆ

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ. ವಿಧಾನಸೌಧದಲ್ಲಿ ಪತ್ತೆಯಾದ ಅಕ್ರಮ ಹಣ ಸಚಿವ ಪುಟ್ಟರಂಗಶೆಟ್ಟಿಯದ್ದು ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನ್ನನ್ನು ಭೇಟಿ ಮಾಡುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಬುಲಾವ್ ನೀಡಿದ್ರು.

ಹೀಗಾಗಿ ಶನಿವಾರ ರಾತ್ರಿ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಪುಟ್ಟರಂಗಶೆಟ್ಟಿ ಒಂದು ಗಂಟೆಗಳ ಕಾಲ ಸಭೆ ನಡೆಸಿದ್ದಾರೆ. ಸಿದ್ದರಾಮಯ್ಯ ಭೇಟಿ ಬಳಿಕ ಮುಖ ಸಪ್ಪಗೆ ಮಾಡಿಕೊಂಡು ಹೊರ ಬಂದ ಪುಟ್ಟರಂಗ ಶೆಟ್ಟಿ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ತಮ್ಮ ಕಾರಿನಲ್ಲಿ ತೆರಳಿದ್ರು. ಒಂದು ಗಂಟೆಗಳ ಕಾಲ ನಡೆದ ಮಾತು ಕತೆಯಲ್ಲಿ ಸಿದ್ದರಾಮಯ್ಯ, ಪುಟ್ಟರಂಗಶೆಟ್ಟಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗ್ತಿದೆ. ಇದನ್ನೂ ಓದಿ:  ಯಾವುದೇ ತನಿಖೆಗೂ ಸಿದ್ಧ, ನನ್ನ ವಿರುದ್ಧ ಷಡ್ಯಂತ್ರ: ಪುಟ್ಟರಂಗಶೆಟ್ಟಿ

ಬಿಜೆಪಿ ಪ್ರತಿಭಟನೆ:
ಇತ್ತ ಸಚಿವ ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಪ್ರಜಾಪ್ರಭುತ್ವದ ದೇವಸ್ಥಾನದಲ್ಲಿ ಸಿಕ್ಕಿ ಹಾಕಿಕೊಂಡ ಹಣಕ್ಕೆ ಯಾರು ಜವಾಬ್ದಾರರು ಎಂಬುದು ಪ್ರಶ್ನೆ ಮಾಡಿದ್ದಾರೆ.  ಇದನ್ನೂ ಓದಿ: ವಿಧಾನಸೌಧದಲ್ಲಿ ಹಣ ಸಿಕ್ಕಿರುವುದು ಕಾಂಗ್ರೆಸ್‍ಗೆ ಪುಟುಗೋಸಿ ಡೀಲ್- ಪ್ರತಾಪ್ ಸಿಂಹ ಲೇವಡಿ

ಸಂಬಂಧಪಟ್ಟ ಸಚಿವರು, ಸರ್ಕಾರದ ಮುಖ್ಯಸ್ಥ ಕುಮಾರಸ್ವಾಮಿ, ಸಮನ್ವಯ ಸಮಿತಿ ಮುಖ್ಯಸ್ಥ ಸಿದ್ದರಾಮಯ್ಯ, ಪುಟುಗೋಸಿ ಅಂತ ಬಿಟ್ಟು ಬಿಡಬೇಕಾ ದಿನೇಶ್ ಗುಂಡೂರಾವ್..? ಹುಚ್ಚರ ಮದುವೆಯಲ್ಲಿ ಉಂಡವನೇ ಜಾಣ.. ನಾಚಿಕೆ ಇಲ್ಲದ ಮದುವೆ ಎಂದು ದೋಸ್ತಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಹುಚ್ಚನ ಮನೇಲಿ ಉಂಡವನೇ ಜಾಣ ಅನ್ನುವಂತೆ ಸರ್ಕಾರವಿದೆ- ಶಾಸಕ ಸಿಟಿ ರವಿ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *