ಶ್ರೀಗಳ ಅಂತಿಮ ದರ್ಶನಕ್ಕೆ ಆಗಮಿಸಿದ ಪಾಂಡಿಚೇರಿ ಸಿಎಂ

ಚಿಕ್ಕಬಳ್ಳಾಪುರ: ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಸೋಮವಾರ ಲಿಂಗೈಕ್ಯರಾಗಿದ್ದು, ಇಂದು ಶ್ರೀಗಳ ಅಂತಿಮ ದರ್ಶನ ಪಡೆಯಲು ಪಾಂಡಿಚೇರಿ ಮುಖ್ಯಮಂತ್ರಿ ವಿ. ನಾರಾಯಣ ಸ್ವಾಮಿ ಆಗಮಿಸಿದ್ದಾರೆ.

ವಿಶೇಷ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ನಂತರ ನೇರವಾಗಿ ರಸ್ತೆ ಮಾರ್ಗವಾಗಿ ತುಮಕೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಈಗಾಗಲೇ ನಟ ದರ್ಶನ್, ಪ್ರಕಾಶ್ ರೈ ಸೇರಿದಂತೆ ಲಕ್ಷಾಂತರ ಭಕ್ತರು ಮಠಕ್ಕೆ ಆಗಮಿಸಿ ಶ್ರೀಗಳ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಕುಮಾರ ಸ್ವಾಮೀಜಿ(111)ಯವರು ಸೋಮವಾರ ಬೆಳಗ್ಗೆ 11.44ಕ್ಕೆ ಲಿಂಗೈಕ್ಯರಾಗಿದ್ದಾರೆ. ನಡೆದಾಡುವ ದೇವರು ಎಂದೇ ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿದ್ದಾರೆ. ಸ್ವಾಮೀಜಿ ನಿಧನರಾಗಿರುವ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಲಕ್ಷಾಂತರ ಮಂದಿ ಭಕ್ತರು ಶ್ರೀಗ ದರ್ಶನ ಪಡೆಯಲು ಸಾಗರೋಪಾದಿಯಲ್ಲಿ ಹರಿದುಬರುತ್ತಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಬಳಿಕ ಕ್ರಿಯಾ ಸಮಾಧಿಯ ವಿಧಿವಿಧಾನಗಳು ನಡೆಯಲಿದೆ. ಇದನ್ನೂ ಓದಿ: 70ರ ದಶಕದಲ್ಲೇ ಗದ್ದುಗೆ ನಿರ್ಮಾಣಕ್ಕೆ ಜಾಗ ಸೂಚಿಸಿದ್ದ ಶ್ರೀ: ಭವನದ ವಿಶೇಷತೆ ಏನು?

https://www.youtube.com/watch?v=g5NjZlf4B-8

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *