ಪಾಕ್ ಆಯ್ತು, ಇದೀಗ ಜಪಾನ್‍ನಲ್ಲೂ ಕೆಜಿಎಫ್ ಹವಾ..!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾ ಭಾರತದಾದ್ಯಂತ ಹವಾ ಸೃಷ್ಠಿಸಿದ್ದು, ನೆರೆಯ ಪಾಕಿಸ್ತಾನದಲ್ಲೂ ರಿಲೀಸ್ ಆಗಿತ್ತು. ಇದೀಗ ಈ ಸಿನಿಮಾ ಜಪಾನ್‍ನಲ್ಲೂ ಸಖತ್ ಸದ್ದು ಮಾಡುತ್ತಿದೆ.

ಹೌದು. ಕೆಜಿಎಫ್ ಸಿನಿಮಾ 50ನೇ ದಿನದತ್ತ ದಾಪುಗಾಲಿಡುತ್ತಿದ್ದು, ಜಪಾನ್‍ನ ಟೋಕ್ಯೋದ ಚಿತ್ರಮಂದಿರವೊಂದರಲ್ಲಿ ಚಿತ್ರದ ಪ್ರದರ್ಶನ ಜೋರಾಗಿ ನಡೆಯುತ್ತಿದೆ. ಜಪಾನ್‍ನಲ್ಲೂ ಅಪಾರ ಕನ್ನಡ ಅಭಿಮಾನಿಗಳು ಸಿನಿಮಾ ವೀಕ್ಷಿಸಿದ್ದಾರೆ. ಅದರಲ್ಲೂ ಕನ್ನಡ ಭಾಷೆಯಲ್ಲಿಯೇ ಸಿನಿಮಾವನ್ನು ನೋಡಿ ಸಂತಸ ಪಟ್ಟಿದ್ದಾರೆ. ಇದನ್ನೂ ಓದಿ:  ಪಾಕಿಸ್ತಾನದಲ್ಲೂ ಕೆಜಿಎಫ್ ಹವಾ ಶುರು

ಈ ವೇಳೆ ಅಲ್ಲಿನ ಕನ್ನಡಾಭಿಮಾನಿಗಳು ಯಶ್ ಜೊತೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ. ಸಿನಿಮಾ ಚೆನ್ನಾಗಿದೆ, ಕನ್ನಡ ಭಾಷೆಯಲ್ಲಿ ನೋಡುತ್ತಿದ್ದೇವೆ ಎಂದು ಹೇಳಿ ಯಶ್ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಅಲ್ಲದೇ ಇದೇ ವೇಳೆ ಅಭಿಮಾನಿಗಳು ಸಿನಿಮಾದ ಒಂದು ಡೈಲಾಗ್ ಹೇಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಅಭಿಮಾನಿಗಳ ಒತ್ತಾಯದ ಮೇರೆಗೆ ಯಶ್ ಫೋನ್ ಮೂಲಕವೇ ಡೈಲಾಗ್ ಹೇಳಿದ್ದಾರೆ. ಯಶ್ ಡೈಲಾಗ್ ಹೇಳಿದ ಬಳಿಕ ಚಿತ್ರಮಂದಿರದಲ್ಲಿದ್ದ ಅಭಿಮಾನಿಯೊಬ್ಬರು, ಯಶ್ ನನ್ನ ರಕ್ತಾನೂ ಕೆಂಪಗೇ ಇದೆಯಲ್ಲಾ ಎಂದು ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *