ಬಾಗಲಕೋಟೆ: ಜಗಳ ಬಿಡಿಸಲು ಹೋದ ವ್ಯಕ್ತಿಗೆ ಚಾಕು ಇರಿದಿರುವ ಘಟನೆ ಬಾಗಲಕೋಟೆ ನಗರದಲ್ಲಿ ನಡೆದಿದೆ.
ಸಂತೋಷ ಡಂಬಳ (40) ವ್ಯಕ್ತಿಯೇ ಚಾಕು ಇರಿತಕ್ಕೊಳಗಾದ ದುರ್ದೈವಿ. ಇವರು ಬಾಗಲಕೋಟೆಯ ಎಂ.ಜಿ.ರಸ್ತೆಯ ಭವಾನಿ ಸ್ವೀಟ್ ಅಂಗಡಿ ಮಾಲೀಕರಾಗಿದ್ದಾರೆ. ಸೋಮವಾರ ಸಂತೋಷ್ ಅವರ ಸ್ವೀಟ್ ಮಾರ್ಟ್ ಅಂಗಡಿ ಎದುರು ಯುವಕರಿಬ್ಬರು ಗಲಾಟೆ ಮಾಡುತ್ತಿದ್ದರು. ಇದನ್ನು ಗಮನಿಸಿದ ಸಂತೋಷ್ ಯುವಕರ ಗಲಾಟೆ ಬಿಡಿಸಲು ಹೋಗಿದ್ದಾರೆ. ಈ ವೇಳೆ ಸಂತೋಷ್ ಮೇಲೆ ಇಬ್ಬರು ದುಷ್ಕರ್ಮಿಗಳು ಚಾಕು ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳದಲ್ಲಿದ್ದವರು ಕರೆ ಮಾಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಾಕು ಇರಿತಕ್ಕೊಳಗಾದ ಸಂತೋಷ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಇತ್ತ ಚಾಕು ಇರಿದ ಯುವಕರಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply