ಬಳ್ಳಾರಿ: ಖಾಸಗಿ ಹಾಗೂ ಸಾರಿಗೆ ಬಸ್ ಪರಸ್ಪರ ಡಿಕ್ಕಿಯಾಗಿ ಚಾಲಕ ಮೃತಪಟ್ಟು 20ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಕೂಡ್ಲಿಗಿ ಬಳಿ ನಡೆದಿದೆ.
ಇಂದು ನಸುಕಿನ ಜಾವ ಕೂಡ್ಲಿಗಿ ರಾಷ್ಟ್ರೀಯ ಹೆದ್ದಾರಿಯ ಮೊರಬ ಕ್ರಾಸ್ ಬಳಿ ಕೆಎಸ್ಆರ್ ಟಿಸಿ ವೋಲ್ವೋ ಬಸ್ ಹಾಗೂ ಎಸ್ಆರ್ಎಸ್ ಸ್ಲೀಪರ್ ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದಲ್ಲಿ ಸಾರಿಗೆ ಬಸ್ ಚಾಲಕ ಮಲ್ಲಿಕಾರ್ಜುನ ಪಾಟೀಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಎಸ್ಆರ್ಎಸ್ ಬಸ್ ಚಾಲಕನ ಎರಡು ಕಾಲುಗಳು ತುಂಡಾಗಿವೆ.
ಈ ಘಟನೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳಿಗೆ ಕೂಡ್ಲಿಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮ್ಸ್ ಆಸ್ಪತ್ರೆಗೆ ಎಸ್.ಪಿ ಅರುಣ ರಂಗರಾಜನ್ ಭೇಟಿ ನೀಡಿದ್ದಾರೆ.
ಅಪಘಾತವಾಗುತ್ತಿದ್ದಂತೆ ಬಸ್ಸಿನಲ್ಲಿದ್ದ ಉಳಿದ ಪ್ರಯಾಣಿಕರನ್ನು ಪೊಲೀಸರು ಬೇರೆ ಬಸ್ ವ್ಯವಸ್ಥೆ ಮಾಡಿ ಕಳುಹಿಸುವ ಮೂಲಕ ಮಾನವೀಯತೆ ಮರೆದಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply