ಪ್ರೀತಿಸಿ ಮದುವೆಯಾಗಿದ್ದ ಯುವತಿ ಕೊಲೆ

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಯುವತಿಯ ತಲೆ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತು ಹಾಕಿ ಕೊಲೆ ಮಾಡಿದ್ದು, ಆಕೆಯ ಶವ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಿಯೂರುದುರ್ಗ ರಸ್ತೆ ಸಂತೆಮಾವತ್ತೂರು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ಅರ್ಪಿತಾ (21) ಕೊಲೆಯಾದ ದುರ್ದೈವಿ. ಈಕೆ ಬೆಂಗಳೂರಿನ ಕಮಲಾನಗರ ನಿವಾಸಿ ಆಗಿದ್ದು, ಲೋಹಿತ್ ಎನ್ನುವವನನ್ನು ಪ್ರೀತಿಸಿ ಮದುವೆಯಾಗಿದ್ದಳು. ಆದರೆ ಇವರಿಬ್ಬರ ಮದುವೆಗೆ ಎರಡು ಕುಟುಂಬಗಳಿಂದ ವಿರೋಧವಿತ್ತು. ವಿರೋಧದ ನಡುವೆಯೂ ಅರ್ಪಿತಾ ಹಾಗೂ ಲೋಹಿತ್ ಮದುವೆ ಆಗಿದ್ದರು.

ಪ್ರೀತಿಸಿ ಮದುವೆ ಆದ ಕೆಲವೇ ದಿನಗಳಲ್ಲಿ ಅರ್ಪಿತಾ ಹಾಗೂ ಲೋಹಿತ್ ಭಿನ್ನಾಭಿಪ್ರಾಯದಿಂದ ಬೇರೆ ಆಗಿದ್ದರು. ಅರ್ಪಿತಾ ಗೊರಗುಂಟೆಪಾಳ್ಯದ ಪೆಟ್ರೋಲ್ ಬಂಕ್‍ನಲ್ಲಿ ಕೆಲಸ ಮಾಡುತ್ತಿದ್ದಳು. ಭಾನುವಾರ ಪೆಟ್ರೋಲ್ ಬಂಕ್ ಡ್ರೆಸ್ ನಲ್ಲೇ ಶವವಾಗಿ ಪತ್ತೆಯಾಗಿದ್ದಾಳೆ.

ಈ ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *