ಹಾಸನ: ಬಿಜೆಪಿ ಶಾಸಕ ಪ್ರೀತಂಗೌಡ ನಿವಾಸಕ್ಕೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತ ಚೇತನ್ ನನ್ನು ಬಂಧಿಸಲಾಗಿದೆ.
ಪ್ರತಿಭಟನೆ ವೇಳೆ ಚೇತನ್ ಗೌಡ ಕಲ್ಲು ತೂರಿದ್ದು ವಿಡಿಯೋದಿಂದ ಬಹಿರಂಗವಾಗಿತ್ತು. ಚೇತನ್ ಜೆಡಿಎಸ್ ಕಾರ್ಯಕರ್ತನಾಗಿದ್ದು, ಲೋಕೋಪಯೋಗಿ ಸಚಿವ ರೇವಣ್ಣ, ಪ್ರಜ್ವಲ್ ಸೇರಿದಂತೆ ಹಲವು ನಾಯಕರೊಂದಿಗೆ ಫೋಟೋ ತೆಗೆಸಿಕೊಂಡಿಸಿದ್ದನು. ಸದ್ಯಕ್ಕೆ ಬಡಾವಣೆ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 307 ಅಡಿ ಪ್ರಕರಣ ದಾಖಲಿಸಿ ಚೇತನ್ ನನ್ನು ಜೈಲಿಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಹಾಸನ ಬಿಜೆಪಿ ಕಾರ್ಯಕರ್ತನ ಮೇಲೆ ಕಲ್ಲೆಸೆತ ಪ್ರಕರಣ – 8 ಮಂದಿ ವಿರುದ್ಧ ಎಫ್‍ಐಆರ್ ದಾಖಲು

ಫೆಬ್ರವರಿ 13ರಂದು ಬಿಜೆಪಿ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆಯುತ್ತಿದ್ದ ಸಯಮದಲ್ಲಿ ಚೇತನ್ ಎರಡು ಕಲ್ಲೆತ್ತಿಕೊಂಡು ಬಂದು ಜನರ ನಡುವೆ ನಿಂತು ಶಾಸಕರ ಮನೆಯತ್ತ ಕಲ್ಲೆಸೆದಿದ್ದಾನೆ. ಬಳಿಕ ಕಲ್ಲೆಸೆದು ಸದ್ದಿಲ್ಲದೆ ಹಿಂದೆ ಓಡಿ ಹೋಗಿದ್ದನು. ಈ ಕುರಿತು ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಂಟು ಜನರ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಈಗ ಶುಕ್ರವಾರ ರಾತ್ರಿ ಚೇತನ್ ನನ್ನು ಬಡಾವಣೆ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಇಂದು ರಾಜ್ಯಾದ್ಯಂತ ಬಿಜೆಪಿ ಹೋರಾಟ- ಜೆಡಿಎಸ್ ವಿರುದ್ಧ ರಾಜ್ಯಪಾಲರಿಗೆ ಕಂಪ್ಲೆಂಟ್
ಶಾಸಕ ಪ್ರೀತಂ ಗೌಡ ಮಾಜಿ ಪ್ರಧಾನಿ ದೇವೇಗೌಡ ವಿಕೆಟ್ ಹೋಗುತ್ತೆ ಎಂದು ಮಾತನಾಡಿದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಅವರ ಮನೆಯ ಎದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಶಾಸಕ ಪ್ರೀತಂ ಗೌಡ ಅವರ ಮನೆಯ ಮೇಲೆ ಕಲ್ಲೆಸೆಯಲಾಗಿತ್ತು. ಪರಿಣಾಮ ಬಿಜೆಪಿ ಕಾರ್ಯಕರ್ತ ರಾಹುಲ್ ಕಿಣಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply