ದೇಶದಲ್ಲಿ ಅಲ್ಪಸಂಖ್ಯಾತರು ಭಯದಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ: ಶಿವಶಂಕರ ರೆಡ್ಡಿ

ಚಿಕ್ಕಬಳ್ಳಾಪುರ: ಭಾರತ ಜಾತ್ಯಾತೀತವಾದ ದೇಶವಾಗಿದ್ದು, ಎಲ್ಲಾ ಜನಾಂಗದವರು, ಧರ್ಮೀಯರು ಸಮಾನತೆಯಿಂದ ಬದುಕುವಂತಹ ಸಂವಿಧಾನವನ್ನ ನಾವು ಒಪ್ಪಿಕೊಂಡಿದ್ದೇವೆ. ಆದರೂ ಕೂಡ ದೇಶದಲ್ಲಿ ಅಲ್ಪಸಂಖ್ಯಾತರು ಭಯದಿಂದ ಬದುಕುವಂತಹ ವಾತಾವರಣ ನಿರ್ಮಾಣವಾಗಿದೆ ಎಂದು ಕೃಷಿ ಸಚಿವ ಶಿವಶಂಕರರೆಡ್ಡಿ ಹೇಳಿಕೆ ನೀಡಿದ್ದಾರೆ.

ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಶಾದಿ ಮಹಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಜಾತಿ, ಧರ್ಮದ ವಿರುದ್ಧ ಕೆಲ ಮತೀಯ ಶಕ್ತಿಗಳು ಅಸ್ಥಿರಗೊಳಿಸುವ ಪ್ರಯತ್ನ ನಡೆಸುತ್ತಿವೆ. ಹೀಗಾಗಿ ಜಾತ್ಯಾತೀತ ತತ್ವಗಳಿಗೆ ತಿಲಾಂಜಲಿ ಇಡುವಂತಹ ಪ್ರಯತ್ನಗಳು ನಡೆಯುತ್ತಿವೆ. ಇದರಿಂದಾಗಿ ಈ ದೇಶದಲ್ಲಿ ಅಲ್ಪ ಸಂಖ್ಯಾತರು ಭಯದಿಂದ ಬದುಕುವಂತಾಗಿದೆ ಎಂದು ತಮ್ಮ ಮಾತನ್ನು ಸಮರ್ಥಿಸಿಕೊಂಡರು.

ಈ ಮತೀಯ ಶಕ್ತಿಗಳಿಂದ ದೇಶವನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ತಮ್ಮದು ಜಾತ್ಯಾತೀತ ದೇಶವಾಗಿರುವುದರಿಂದ ಇಲ್ಲಿ ಎಲ್ಲಾ ವರ್ಗದ ಜನರು ಇದ್ದಾರೆ. ಆದರಿಂದ ನಾವೆಲ್ಲರೂ ಸೇರಿ ಜಾತ್ಯಾತೀತ ಸಂವಿಧಾನವನ್ನು ಉಳಿಸುವಂತಹ ಕೆಲಸ ಮಾಡಬೇಕಿದೆ ಎಂದು ಅಲ್ಪಸಂಖ್ಯಾತರಲ್ಲಿ ಶಿವಶಂಕರ್ ರೆಡ್ಡಿ ಮನವಿ ಮಾಡಿಕೊಂಡರು.

ಇದೇ ವೇಳೆ ಇಂದು ಬೆಂಗಳೂರಿನಲ್ಲಿ ಏರ್ ಶೋ ತಾಲೀಮು ವೇಳೆ ಯುದ್ಧವಿಮಾನಗಳ ಅಪಘಾತ ದುರಾದೃಷ್ಟಕರ ಎಂದು ಬೇಸರ ವ್ಯಕ್ತ ಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *