ತಾಯಿ ಚಿತೆಗೆ ಬೆಂಕಿ ಇಡುವಾಗ್ಲೇ ಮಗನಿಗೆ ಹೃದಯಾಘಾತ..!

ಕಾರವಾರ: ಮೃತಪಟ್ಟ ತಾಯಿಯ ಚಿತೆಗೆ ಬೆಂಕಿ ಇಟ್ಟು ಮಗನೂ ಪ್ರಾಣಬಿಟ್ಟ ಮನಕಲಕುವ ಘಟನೆ ಕಾರವಾರ ತಾಲೂಕಿನ ಸಿದ್ಧರದಲ್ಲಿ ನಡೆದಿದೆ.

ಮಂಜುನಾಥ ಆತ್ಮಾರಾಮ ಕೊಳಂಬಕರ್(49) ಮೃತಪಟ್ಟ ವ್ಯಕ್ತಿ. ಮಂಜುನಾಥ್ ಅವರ ತಾಯಿ ಸಾವಿತ್ರಿ ಕೊಳಂಬಕರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳವಾರ ಮೃತಪಟ್ಟಿದ್ದಾರೆ. ಹೀಗಾಗಿ ಅಂತ್ಯಸಂಸ್ಕಾರಕ್ಕೆಂದು ಅವರ ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲಾಗಿತ್ತು.

ತಾಯಿಯ ಏಕೈಕ ಮಗನಾಗಿದ್ದ ಮಂಜುನಾಥ್ ಎಲ್ಲ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿ ಚಿತೆಗೆ ಬೆಂಕಿ ಇಡುತ್ತಿದ್ದಂತೆಯೇ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಿದ್ಧರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಾರವಾರದ ಜಿಲ್ಲಾಸ್ಪತ್ರೆಗೆ ಕರೆ ತರುವಷ್ಟರಲ್ಲಿ ಮಂಜುನಾಥ್ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಮೃತ ಮಂಜುನಾಥ್‍ನಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ತಾಯಿಯ ಸಾವು ಮಗನನ್ನೂ ಕರೆಸಿಕೊಂಡಿದ್ದು ಇಡೀ ಕುಟುಂಬ ತಾಯಿ- ಮಗನ ಸಾವಿಗೆ ಕಂಬನಿ ಮಿಡಿದಿದೆ.

ಈ ಘಟನೆ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *