ಮಂಡ್ಯ: ನಟಿ ಸುಮಲತಾ ಅಂಬರೀಶ್ ಅವರು ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ ಅವರನ್ನು ಬುಧವಾರ ಭೇಟಿ ಮಾಡಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಣ್ಣ ನೀರಾವರಿ ಸಚಿವ ಸಿ.ಎಸ್ ಪುಟ್ಟರಾಜು ಅವರು ಟಾಂಗ್ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಯಾರು ಯಾರ ಮನೆಗೂ ಹೋಗಿ ತೀರ್ಮಾನ ಮಾಡಿದ್ರು ಅನ್ನೋದು ಮುಖ್ಯವಲ್ಲ. ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ನ ಭದ್ರಕೋಟೆಯಾಗಿದೆ. ಹೀಗಾಗಿ ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಸ್ಪರ್ಧೆ ಮಾಡಬೇಕು ಎಂದು ಖಾರವಾಗಿಯೇ ನುಡಿದಿದ್ದಾರೆ.

ಇಂದು ಎರಡೂ ಪಕ್ಷಗಳು ಸೇರಿ ಇಂದು ಸಮ್ಮಿಶ್ರ ಸರ್ಕಾರ ಮಾಡಿದ್ದೇವೆ. ಆ ಹಿನ್ನೆಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿಯೂ ಎರಡೂ ಪಕ್ಷಗಳು ಸೇರಿ ಬಿಜೆಪಿಯನ್ನು ಧೂಳೀಪಟ ಮಾಡುವ ಕೆಲಸ ಮಾಡುತ್ತೇವೆ. ಇಲ್ಲಿ ಯಾರ ಬಗ್ಗೆಯೂ ಲಘುವಾಗಿ ಮಾತನಾಡಲು ನಾನು ಸಿದ್ಧನಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ ಅವನದ್ದೇ ಆದ ಜವಾಬ್ದಾರಿ ನಿರ್ಣಯಗಳನ್ನು ಕೈಗೊಳ್ಳಲು ಅವಕಾಶವಿದೆ. ಹೀಗಾಗಿ ಈ ಬಗ್ಗೆ ಏನೂ ಹೇಳಲು ನಾನು ಇಷ್ಟ ಪಡುವುದಿಲ್ಲ. ಆದ್ರೆ ನಮ್ಮ ಪಕ್ಷ ಏನು ತೀರ್ಮಾನ ಮಾಡುತ್ತದೋ ಆ ಚೌಕಟ್ಟಿನಲ್ಲಿ ಜಿಲ್ಲಾ ಉಸ್ತುವಾರಿಯಾಗಿರುವ ನಾನು ನನ್ನ ಜವಾಬ್ದಾರಿ ರ್ನಿಹಿಸಬೇಕಾಗಿದೆ ಅಂದ್ರು.
ಈ ಮೂಲಕ ಸುಮಲತಾ ಅವರಿಗೆ ಮಂಡ್ಯದಿಂದ ಟಿಕೆಟ್ ಕೊಡಲು ಕಾಂಗ್ರೆಸ್ ಒಪ್ಪಿದರೂ, ಜೆಡಿಎಸ್ ಮಂಡ್ಯ ಕ್ಷೇತ್ರವನ್ನು ಬಿಟ್ಟು ಕೊಡಲು ಒಪ್ಪುತ್ತಾ ಇಲ್ವಾ ಎಂಬುದು ಸದ್ಯದ ಕುತೂಹಲವಾಗಿದೆ.
ಸುಮಲತಾ ಅಂಬರೀಶ್ ಅವರು ಇಂದು ನನ್ನನ್ನು ಭೇಟಿಯಾಗಿ ಮಾತುಕತೆ ನಡೆಸಿದ ಕ್ಷಣ.@INCKarnataka pic.twitter.com/gyYO11KWLS
— Siddaramaiah (@siddaramaiah) February 20, 2019
ಸಿದ್ದರಾಮಯ್ಯ ಭೇಟಿ ಮಾಡಿದ ಸುಮಲತಾ ಹೇಳಿದ್ದೇನು..?
ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ನಿನ್ನೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರ ಗಮನಕ್ಕೆ ತಂದಿದ್ದೇನೆ. ಮಂಡ್ಯದ ಜನತೆ ಹಾಗೂ ಅಂಬರೀಶ್ ಅವರ ಅಭಿಮಾನಿಗಳ ಆಸೆ, ಅಪೇಕ್ಷೆಯನ್ನು ಸಿದ್ದರಾಮಯ್ಯ ಅವರ ಮುಂದಿಟ್ಟಿದ್ದೇನೆ. ಪಕ್ಷದ ಕಾರ್ಯಕರ್ತರು ಕೂಡ ಸ್ಪರ್ಧೆ ಮಾಡಬೇಕೆಂದು ಇಷ್ಟಪಡುತ್ತಿದ್ದಾರೆ. ಜನರು ಕೂಡ ಅಂಬರೀಶ್ ಅವರ ಮೇಲಿರುವ ಪ್ರೀತಿಯಿಂದ ಪ್ರೀತಿ, ವಿಶ್ವಾಸವನ್ನು ಇಷ್ಟು ವರ್ಷ ಪಡೆದುಕೊಂಡು ಬಂದಿದ್ದೇವೆ. ಅದನ್ನು ಇದೇ ರಿತಿ ಮುಂದುವರಿಸಿಕೊಂಡು ಹೋಗುವ ಆಸೆ ಜನರಲ್ಲಿದೆ. ಹೀಗಾಗಿ ಅವರ ಆಸೆಯನ್ನು ನಾನು ಇಷ್ಟು ದೂರ ಬಂದು ಹೇಳುತ್ತಿದ್ದೇನೆ ಎಂದು ಹೇಳಿದ್ದೇನೆ. ಈ ವೇಳೆ ಅವರು ಕೂಡ ಈ ವಿಚಾರ ನನಗೆ ಗೊತ್ತಾಯಿತು. ಹೀಗಾಗಿ ಈ ಕುರಿತು ನಾವು ಚರ್ಚೆ ಮಾಡಿ ನಿಮಗೆ ತಿಳಿಸುತ್ತೇನೆ ಎಂದು ಸಿದ್ದರಾಮಯ್ಯ ಅವರ ಜೊತೆ ನಡೆಸಿದ ಮಾತುಕತೆಯ ಬಗ್ಗೆ ತಿಳಿಸಿದ್ರು.

ಸ್ವತಂತ್ರವಾಗಿ ಸ್ಪರ್ಧೆ ಮಾಡುವ ನಿರ್ಧಾರದ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ. ಸದ್ಯ ಅಂಬರೀಶ್ ಅವರು 20, 25 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಲಾಯಲ್ ಪಾರ್ಟಿ ವರ್ಕರ್ ಆಗಿದ್ದರು. ಅವರು ಯಾವುದೇ ಆಫರ್ ಗಳತ್ತ ಹೋಗಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅವರ ಸೇವೆ ಇದೆ. ಅದೇ ರೀತಿ ನಾವು ಕೂಡ ಕಾಂಗ್ರೆಸ್ ಪಕ್ಷದಿಂದಲೇ ಗುರುತಿಸಿಕೊಳ್ಳಬೇಕು ಅನ್ನೋ ಭಾವನೆ ಇರುವುದಾಗಿ ಅವರು ಅಭಿಪ್ರಾಯಿಸಿದ್ರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply