ಬರ್ತ್ ಡೇ ಸಂಭ್ರಮದಲ್ಲಿ ರಾಧಿಕಾ- ಅಭಿಮಾನಿಗಳಲ್ಲಿ ಸಿಂಡ್ರೆಲಾ ಕ್ಷಮೆ..!

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಆದರೆ ಅವರ ಬರ್ತ್ ಡೇ ದಿನವೇ ತಮ್ಮ ಅಭಿಮಾನಿಗಳ ಬಳಿ ಕ್ಷಮೆಯಾಚಿಸಿದ್ದಾರೆ.

ರಾಧಿಕಾ ಪಂಡಿತ್ ತಮ್ಮ ಹುಟ್ಟುಹಬ್ಬವನ್ನು ಪ್ರತಿ ಬಾರಿಯೂ ಅಭಿಮಾನಿಗಳ ಜೊತೆಯೇ ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಮಾತ್ರ ರಾಧಿಕಾ ತಮ್ಮ ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ಸಿಗುತ್ತಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬರ್ತ್ ಡೇ ದಿನದ ಮುನ್ನವೇ ಅಂದರೆ ಬುಧವಾರವೇ ವಿಡಿಯೋ ಅಪ್ಲೋಡ್ ಮಾಡುವ ಮೂಲಕ ತಿಳಿಸಿದ್ದಾರೆ. ಜೊತೆಗೆ ಇದರಿಂದ ಅಭಿಮಾನಿಗಳು ಬೇಸರ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ವಿಡಿಯೋದಲ್ಲಿ ಏನ್ ಹೇಳಿದ್ದಾರೆ?:
ಪ್ರತಿ ವರ್ಷ ನನ್ನ ಹುಟ್ಟುಹಬ್ಬದ ದಿನ ನೀವೆಲ್ಲ ಭೇಟಿ ಮಾಡಲು ಬರುತ್ತೀರಿ. ನಿಮ್ಮ ಊರಿನಿಂದ ನನ್ನ ಹುಟ್ಟುಹಬ್ಬ ಆಚರಿಸಲು ಪ್ರೀತಿಯಿಂದ ಬರುತ್ತೀರಿ. ಆದರೆ ಈ ವರ್ಷ ನಾನು ಬೆಂಗಳೂರಿನಲ್ಲಿ ಇರಲ್ಲ. ನನ್ನ ಬರ್ತ್ ಡೇ ದಿನ ಬೆಂಗಳೂರಿನಲ್ಲಿ ಇರಬೇಕು ಎಂದು ತುಂಬಾ ಪ್ರಯತ್ನ ಪಟ್ಟೆ. ಆದರೆ ಕಾರಣಾಂತರದಿಂದ ನಾನು ಬೆಂಗಳೂರಿಗೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ದಯವಿಟ್ಟು ಬೇಸರ ಮಾಡಿಕೊಳ್ಳಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ನಾನು ಬೆಂಗಳೂರಿಗೆ ಬಂದ ಮೇಲೆ ಎಲ್ಲರನ್ನೂ ಭೇಟಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಆದರೆ ಇದೇ ರೀತಿ ನಿಮ್ಮ ಪ್ರೀತಿ, ಆಶೀರ್ವಾದ ಸದಾ ನನ್ನ ಮೇಲೆ ಇರಲಿ. ಈ ಸಂದೇಶವನ್ನು ಎಲ್ಲರಿಗೂ ಶೇರ್ ಮಾಡಿ, ಲವ್ ಯು ಆಲ್ ಎಂದು ರಾಧಿಕಾ ಅವರು ಹೇಳಿದ್ದಾರೆ.

https://www.instagram.com/p/BuqnElihjmi/

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *