ಆಪರೇಷನ್ ಫೇಲ್, ರೋಗಿ ಸಾವು – ಚಿಕ್ಕಬಳ್ಳಾಪುರ ಆಸ್ಪತ್ರೆ ಮುಂದೆ ಸಂಬಂಧಿಕರ ಪ್ರತಿಭಟನೆ

– ಗರ್ಭಿಣಿಯಾಗಿರಲಿಲ್ಲ ಎಂದು ಸಂಬಂಧಿಕರ ಆರೋಪ
– ಮಹಿಳೆಯ ಹೊಟ್ಟೆಯಲ್ಲಿ ಭ್ರೂಣವಿತ್ತು
– ಸಂಬಂಧಿಕರಿಗೆ ತಿಳಿಸಿ ಆಪರೇಷನ್
– ಪ್ರಕರಣದ ಬಗ್ಗೆ ವೈದ್ಯೆ ಸ್ಪಷ್ಟನೆ

ಬೆಂಗಳೂರು: ಮಗು ಇದೆ ಎಂದು ಭಾವಿಸಿ ವೈದ್ಯರು ಆಪರೇಷನ್ ಮಾಡಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕು ಮಂಡಿಕಲ್ ಹೋಬಳಿಯ ಬೀಸೇಗಾರಹಳ್ಳಿ ಗ್ರಾಮದ 23 ವರ್ಷದ ಮುನಿರತ್ನಮ್ಮ ಮೃತ ಮಹಿಳೆ. ಕಳೆದ ಭಾನುವಾರ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮುನಿರತ್ನಮ್ಮಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಪರಿಶೀಲನೆ ನಡೆಸಿದ ಜಿಲ್ಲಾಸ್ಪತ್ರೆಯ ಸ್ತ್ರೀ ರೋಗ ತಜ್ಞೆ ರೇಣುಕಾ, ಮುನಿರತ್ನಮ್ಮಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಗೆ ಮಾಡಿಸಿಕೊಂಡು ಬರುವಂತೆ ಕಳುಹಿಸಿದ್ದರು.

ಸ್ಕ್ಯಾನಿಂಗ್ ಮಾಡಿಸಿಕೊಂಡ ಬಂದ ಮಹಿಳೆಯ ರಿಪೋರ್ಟ್ ನೋಡಿದ ವೈದ್ಯೆ ರೇಣುಕಾ, ಹೊಟ್ಟೆಯಲ್ಲಿ ಮಗು ಅಡ್ಡ ತಿರುಗಿದೆ ಸರಿಯಾಗಿ ಕಾಣ್ತಿಲ್ಲ. ಕೂಡಲೇ ಅಪರೇಷನ್ ಮಾಡಬೇಕು ಎಂದು ತರಾತರುರಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಆದರೆ ಶಸ್ತ್ರಚಿಕಿತ್ಸೆ ವೇಳೆ ಹೊಟ್ಟೆಯಲ್ಲಿ ಯಾವುದೇ ಮಗು ಕಂಡುಬಂದಿಲ್ಲ. ಇದರಿಂದ ಗಾಬರಿಗೊಂಡ ವೈದ್ಯೆ ಕೂಡಲೇ ಮಹಿಳೆಯನ್ನು ಅಂಬ್ಯುಲೆನ್ಸ್ ಮುಖಾಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಸಾಗಿ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಕಳೆದ ಎರಡು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸಗೆ ದಾಖಲಾಗಿದ್ದ ಮುನಿರತ್ನಮ್ಮ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಹೀಗಾಗಿ ಆಕ್ರೋಶಗೊಂಡಿರುವ ಮೃತಳ ಸಂಬಂಧಿಕರು, ಮೃತದೇಹವನ್ನು ಜಿಲ್ಲಾಸ್ಪತ್ರೆ ಎದುರು ಇಟ್ಟು ಪ್ರತಿಭಟನೆ ನಡೆಸಿದ್ದರು. ಮುನಿರತ್ನಮ್ಮಳ ಸಾವಿಗೆ ವೈದ್ಯೆ ರೇಣುಕಾ ಹಾಗೂ ಜಿಲ್ಲಾಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ವಿಜಯ್ ಕುಮಾರ್ ನೇರ ಹೊಣೆ ಎಂದು ಆರೋಪಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್ ಹಾಗೂ ಕ್ಷೇತ್ರದ ಶಾಸಕ ಡಾ ಕೆ ಸುಧಾಕರ್ ಬರುವಂತೆ ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಬಂದ ಚಿಕ್ಕಬಳ್ಳಾಪುರ ನಗರ ಪೊಲೀಸರು ಪ್ರತಿಭಟನಕಾರರ ಮನವೊಲಿಸಿ ದೂರು ನೀಡುವಂತೆ ಮನವಿ ಮಾಡಿಕೊಂಡರು. ಈ ಸಂಬಂಧ ಮೃತಳ ಸಂಬಂಧಿಕರು ವೈದ್ಯೆ ವಿರುದ್ಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮತ್ತೊಂದೆಡೆ ಮೃತಳ ಸಂಬಂಧಿಕರ ಆರೋಪಕ್ಕೆ ಪ್ರತಿಕ್ರಿಯಿಸಿರುವ ವೈದ್ಯೆ ರೇಣುಕಾ, ಸ್ಕ್ಯಾನಿಂಗ್ ರಿಪೋರ್ಟ್ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಿದ್ದೆ. ಮುನಿರತ್ಮಮ್ಮಳ ಗಂಭೀರ ಸ್ಥಿತಿ ಬಗ್ಗೆ ಸಂಬಂಧಿಕರಿಗೆ ತಿಳಿಸಿ ಅಪರೇಷನ್ ಮಾಡಿದ್ದೇನೆ. ನನ್ನದೇನು ತಪ್ಪಿಲ್ಲ ಎಂದು ಹೇಳಿದ್ದಾರೆ. ಆದರೆ ಇತ್ತ ಮೃತ ಮುನಿಲಕ್ಷಮ್ಮಳಿಗೆ 3 ವರ್ಷದ ಮಗು ಸಹ ಇದ್ದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Comments

Leave a Reply

Your email address will not be published. Required fields are marked *