ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಾಡಿನಲ್ಲಿ ಕ್ಲಿಕ್ಕಿಸಿದ ಫೋಟೋವನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಉಡುಗೊರೆಯಾಗಿ ಪಡೆದಿದ್ದಾರೆ.
ಇತ್ತೀಚೆಗೆ ಶ್ರೀಮುರಳಿ ‘ಮದಗಜ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಮದಗಜ ಜಿತ್ರದ ನಿರ್ಮಾಪಕ ಉಮಾಪತಿ, ದರ್ಶನ್ ಅರಣ್ಯದಲ್ಲಿ ಸೆರೆ ಹಿಡಿದ ಹುಲಿಯ ಫೋಟೋವನ್ನು ಶ್ರೀ ಮುರಳಿ ಅವರಿಗೆ ನೀಡಿದ್ದಾರೆ. ಈ ಫೋಟೋಗೆ 10 ಸಾವಿರ ರೂ. ಆಗಿದ್ದು, ಹುಲಿಯ ಫೋಟೋ ಪಡೆದ ಶ್ರೀ ಮುರಳಿ ನಿರ್ಮಾಪಕರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಮಾರ್ಚ್ 3ರ ವಿಶ್ವ ವನ್ಯಜೀವಿ ದಿನ ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್‍ನಲ್ಲಿ ಮೂರು ದಿನಗಳ ಕಾಲ ದರ್ಶನ್ ಸೆರೆ ಹಿಡಿದ ಛಾಯಾಚಿತ್ರ ಪ್ರದರ್ಶನವಾಗಿತ್ತು. ಈ ಪ್ರದರ್ಶನದಲ್ಲಿ ದರ್ಶನ್ ಅವರು ಕಾಡಿನಲ್ಲಿ ಸೆರೆ ಹಿಡಿದ 75 ಆಯ್ದ ಛಾಯಾಚಿತ್ರಗಳನ್ನು ವನ್ಯಜೀವಿ ಸಂರಕ್ಷಣಾ ನಿಧಿಗೆ ಹಣ ಸಂಗ್ರಹಿಸಲು ಪ್ರದರ್ಶನಕ್ಕೆ ಇಡಲಾಗಿತ್ತು. ತಮ್ಮ ಚಿತ್ರಗಳ ಪ್ರದರ್ಶನದ ಜೊತೆಗೆ ಮಾರಾಟದ ಆಯೋಜನೆ ಕೂಡ ನಡೆದಿತ್ತು. ಪ್ರತಿ ಚಿತ್ರಕ್ಕೆ 2000 ಬೆಲೆ ನಿಗದಿ ಆಗಿದ್ದು, ಫೋಟೋ ಜೊತೆಗೆ ದರ್ಶನ್ ಆಟೋಗ್ರಾಫ್ ಪಡೆಯಲು 500 ಹೆಚ್ಚುವರಿ ಹಣ ನೀಡಬೇಕಾಗಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply