ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಗೆಲ್ಲುವುದು ನಮ್ಮ ಗುರಿ. ಈ ಚುನಾವಣೆಯನ್ನ ಸವಲಾಗಿ ಸ್ವೀಕರಿಸಿದ್ದೇವೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಮೊದಲ ಹಂತದ ನಾಮಪತ್ರ ಸಲ್ಲಿಕೆ ಇಂದಿನಿಂದ ಪ್ರಾರಂಭವಾಗಿದೆ. ಈ ಹಿನ್ನಲೆಯಲ್ಲಿ ಸಭೆ ಮಾಡಿದ್ದೇವೆ. ಈಗಾಗಲೇ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ನಡೆಯುತ್ತಿದೆ. ನಾವು ಉತ್ತಮ ಆಡಳಿತ ರಾಜ್ಯದಲ್ಲಿ ನೀಡುತ್ತಿದ್ದು, ದೇಶಕ್ಕೆ ಉತ್ತಮ ಸಂದೇಶ ನೀಡುತ್ತಿದ್ದೇವೆ ಎಂದರು.

ಲೋಕಸಭಾ ಚುನಾವಣಾ ಪ್ರಚಾರದ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರ ಜೊತೆ ನಿನ್ನೆ ಚರ್ಚೆ ಮಾಡಿದ್ದೇವೆ. ಎರಡು ಮೂರು ಕ್ಷೇತ್ರದಲ್ಲಿ ಸಮಸ್ಯೆ ಇದೆ. ಅದನ್ನು ಸರಿಪಡಿಸುತ್ತೇವೆ. ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ದೇವೇಗೌಡ ಅವರು ಸಮಸ್ಯೆ ಪರಿಹಾರ ಮಾಡಲು ಸಮರ್ಥರಿದ್ದಾರೆ. ಬೆಂಗಳೂರಿನಿಂದ ಪ್ರಚಾರ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.
ಉಪಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನ ಗೆದ್ದಿದ್ದೇವೆ. 28 ಕ್ಷೇತ್ರ ಗೆಲ್ಲುತ್ತೇವೆ ಎನ್ನುವ ವಿಶ್ವಾಸ ನಮಗಿದೆ. ಜಂಟಿ ಪ್ರಚಾರವು ಮಾರ್ಚ್ 31ರಿಂದ ಆರಂಭಿಸುತ್ತೇವೆ. ದೇಶದಲ್ಲಿ ಬದಲಾವಣೆ ತರಬೇಕು ಎನ್ನುವುದು ನಮ್ಮ ಗುರಿ. ಅದು ಕರ್ನಾಟಕದಿಂದಲೇ ಆರಂಭವಾಗಲಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾದ ಬಳಿಕ ನಡೆದ ಉಪಚುನಾವಣೆ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಿದೆ. ಇದು ಲೋಕಸಭೆಗೂ ಮುಂದುವರಿಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Leave a Reply