ಮಡಿಕೇರಿ: ಮಂಡ್ಯದಲ್ಲಿ ಮೂವರು ಸುಮಲತಾ ಅವರನ್ನು ನಿಲ್ಲಿಸಲಾಗಿದೆ. ಆದರೆ ಬಿಜೆಪಿಯಿಂದ ಸುಮಲತಾ ಅಂಬರೀಶ್ ಗೆ ಸಂಪೂರ್ಣ ಬೆಂಬಲ ನೀಡುತ್ತಿದೇವೆ. ಈ ಬಾರಿ ಮಂಡ್ಯದಲ್ಲಿ ನಿಖಿಲ್ ನೋಟು ಮತ್ತು ಸುಮಲತಾ ವೋಟಿನ ನಡುವೆ ಸ್ಪರ್ಧೆ ನಡೆಯುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಜನಸಾಮಾನ್ಯರ ಸಲಹೆ ಸೂಚನೆ ಪಡೆದು ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ದೇಶದ ಭದ್ರತೆಗೆ ಪ್ರಥಮ ಸ್ಥಾನ, ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ, ಸೇನೆಗೆ ಬೇಕಾದ ವಿಶೇಷ ಉಪಕರಣಗಳ ಪೂರೈಕೆ ನುಸುಳುಕೋರರನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

2030ರ ವೇಳೆಗೆ ಭಾರತದಲ್ಲಿ ಸಂಪೂರ್ಣ ಬಡತನ ನಿರ್ಮೂಲನೆ ಮಾಡುವುದು ಬಿಜೆಪಿ ಪಕ್ಷದ ಗುರಿಯಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಖಚಿತ. ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಅಂದ್ರು.
2022 ರ ಒಳಗೆ ರೈಲ್ವೆ ಟ್ರ್ಯಾಕ್ ಸಂಪೂರ್ಣ ಅಳವಡಿಕೆ ಭಾರತೀಯ ಜನತಾ ಪಕ್ಷದಿಂದ ಸ್ಪಷ್ಟ ನಿಲುವು. ಉಗ್ರವಾದಕ್ಕೆ ಯುಪಿಎ ಸರ್ಕಾರದಿಂದ ಬೆಂಬಲ ನೀಡುತ್ತಿದೆ. ಆದರೆ ಉಗ್ರವಾದದ ವಿರುದ್ಧ ಎನ್ ಡಿಎ ನಿಲುವು ತೆಗೆದುಕೊಳ್ಳಲಿದೆ. ಮಂಗಳವಾರ ಪ್ರಧಾನಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು ಸೇರಿದಂತೆ 22 ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.
ನರೇಂದ್ರ ಮೋದಿಯನ್ನು ಸೋಲಿಸಲು ಕರ್ನಾಟಕದಲ್ಲಿ ಹೊಂದಾಣಿಕೆಯಾಗಿದೆ. ಜನ ನಗುವಂತ ವಾತವರಣ ನಿರ್ಮಾಣ ಮಾಡಿದ್ದಾರೆ. ಗೆದ್ದೆ ಗೆಲ್ಲುತ್ತೇವೆ ಎನ್ನುವ ಮೈತ್ರಿ ಸರ್ಕಾರಕ್ಕೆ ಸೋಲು ಖಚಿತವಾಗಿದೆ.


Leave a Reply