ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯ್ ಶಂಕರ್ ಅವರನ್ನು ನಾವು ಬೆಂಬಲಿಸುತ್ತಿದ್ದೇವೆ. ನಮ್ಮ ಸಮುದಾಯದ ನಾಯಕರಿಗೆ ನಿಂದಿಸಿರುವ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರಿಗೆ ಬೆಂಬಲ ನೀಡಲ್ಲ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಮಹಾಸಭಾ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬ್ರಾಹ್ಮಣ ಸಮಾಜದ ಮುಖಂಡ ಕೆ. ರಘುರಾಂ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚನೆ ಮಾಡಿದೆ. ಬೆಂಗಳೂರಿನಲ್ಲಿ ಬಹುಕೋಟಿ ಮೊತ್ತದ ವಿಸ್ತಾರವಾದ ನಿವೇಶನವನ್ನು ಬ್ರಾಹ್ಮಣ ಮಹಾಸಭಾಗೆ ನೀಡಿದೆ. ಆದರಿಂದ ಮೈತ್ರಿ ಅಭ್ಯರ್ಥಿಗೆ ಬ್ರಾಹ್ಮಣ ಸಮುದಾಯ ಮತ ಹಾಕಲಾಗುತ್ತದೆ ಎಂದು ತಿಳಿಸಿದರು.

ಆರ್. ಗುಂಡೂರಾವ್ ಅವರು ನಮ್ಮೊಂದಿಗಿಲ್ಲ. ಅವರು ನಮ್ಮ ಸಮುದಾಯಕ್ಕಾಗಿ ಬಹಳಷ್ಟು ದುಡಿದಿದ್ದಾರೆ. ಇಂತಹ ಹಿರಿಯ ನಾಯಕರನ್ನು ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸುವುದು ಸರಿಯಲ್ಲ ಎಂದು ಇಲ್ಲಿ ಬಿಜೆಪಿ ಅಭ್ಯರ್ಥಿಯಾದವರಿಗೆ ನಾವು ಹೇಳಿದ್ದೇವೆ. ಅವರ ವಿರುದ್ಧ ಪ್ರತಿಭಟನೆಯನ್ನೂ ಕೂಡ ಮಾಡಿದ್ದೇವೆ. ಹೀಗಾಗಿ ಸಂಭಾವಿತ ಹಾಗೂ ಒಳ್ಳೆಯ ನಡತೆ ಹೊಂದಿರುವ ವಿಜಯ್ ಶಂಕರ್ ಅವರಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಹೇಳಿದರು.

Leave a Reply