ಉಡುಪಿಯಲ್ಲಿ 5 ದಿನ ಸಿಎಂಗೆ ಪ್ರಕೃತಿ ಚಿಕಿತ್ಸೆ

– ರೆಸಾರ್ಟ್ ಆಸುಪಾಸಿನಲ್ಲಿ ಮಾಧ್ಯಮಕ್ಕೆ ನಿರ್ಬಂಧ

ಉಡುಪಿ: ಕೆಲ ದಿನಗಳ ಹಿಂದೆ ಆಯುರ್ವೇದಿಕ್ ಚಿಕಿತ್ಸೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ತೆರಳಿದ್ದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಇದೀಗ ಮತ್ತೆ ಉಡುಪಿಗೆ ಮರಳಿದ್ದಾರೆ.

ನಗರದ ಕಾಪುವಿನಲ್ಲಿರುವ ಸಾಯಿರಾಧಾ ಹೆರಿಟೇಜ್ ರೆಸಾರ್ಟ್ ನಲ್ಲಿ ಸಿಎಂಗೆ ಪ್ರಕೃತಿ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಜೊತೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೂಡ ಒಂದು ವಾರದ ಕೋರ್ಸ್ ಕೊಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಮಾಜಿ ಪ್ರಧಾನಿ ಉಡುಪಿಗೆ ಆಗಮಿಸಿದ್ದಾರೆ.

ಚಿಕಿತ್ಸೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ಐದು ದಿನಗಳ ಕಾಲ ಹೆಲ್ತ್ ರಿಸಾರ್ಟ್‍ನಲ್ಲೇ ತಂಗಲಿದ್ದು, ಈ ಐದು ದಿನವೂ ಮಾಧ್ಯಮಗಳಿಂದ ದೂರವಿರಲು ಸಿಎಂ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಈಗಾಗಲೇ ರೆಸಾರ್ಟ್ ಆಸು-ಪಾಸು ಮಾಧ್ಯಮಗಳಿಗೆ ಚಿತ್ರೀಕರಣಕ್ಕೆ ನಿರ್ಬಂಧ ಹೇರಲಾಗಿದೆ. ರೆಸಾರ್ಟ್ ಸಮೀಪ ಮಾಧ್ಯಮದವರನ್ನು ಬಿಡದಂತೆ ಸಿಎಂ ಅವರು ಪೊಲೀಸರಿಗೆ ಸೂಚನೆ ನೀಡಿದ್ದು, ಸದ್ಯ ಕುಮಾರಸ್ವಾಮಿಯವರು ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಇದನ್ನೂ ಓದಿ: ಮಾಧ್ಯಮಗಳ ಮೇಲೆ ಮತ್ತೆ ಸಿಎಂ ಮುನಿಸು – ನಿಮ್ಮ ಜೊತೆ ಮಾತನಾಡ್ಬಾರದೆಂದು ತೀರ್ಮಾನಿಸಿದ್ದೇನೆ ಎಂದ ಎಚ್‍ಡಿಕೆ

ಬೆಂಗಳೂರು ತೆರಳಿದ್ದೇಕೆ?:
ಆರೋಗ್ಯ ಸುಧಾರಿಸಲು ನಾನು ಉಡುಪಿಗೆ ಬಂದಿದ್ದೆ. ಆದರೆ ಶ್ರೀಲಂಕಾದ ಸ್ಫೋಟ ಪ್ರಕರಣ ನನ್ನನ್ನು ಘಾಸಿಗೊಳಿಸಿದೆ. ಸೋಮವಾರದಿಂದ ನನಗೆ ಇದೇ ತಲೆಯಲ್ಲಿ ಕಾಡುತ್ತಿದೆ. ಬಾಂಬ್ ಪ್ರಕರಣದಲ್ಲಿ ನನ್ನ ಆತ್ಮೀಯರು ಮರಣ ಹೊಂದಿದ್ದಾರೆ. ಮೂರು ನಾಲ್ಕು ದಿನ ಕಾಪುವಿನಲ್ಲಿ ಆಯುರ್ವೇದಿಕ್ ಚಿಕಿತ್ಸೆಗೆಂದು ಉಳಿದುಕೊಳ್ಳಬೇಕೆಂದಿದ್ದೆ. ಆದರೆ (ಏ. 22) ಸೋಮವಾರದಿಂದ ನನಗೆ ನೋವನ್ನು ತಡೆದುಕೊಳ್ಳಲಾಗುತ್ತಿಲ್ಲ. ಹೀಗಾಗಿ ವೈದ್ಯರ ಜೊತೆ ಚರ್ಚೆ ಮಾಡಿದ್ದೇನೆ. ಅವರು 27 ರ ನಂತರ ಮತ್ತೆ ಉಡುಪಿಗೆ ಬರಲು ಸೂಚಿಸಿದ್ದಾರೆ. ಚಿಕಿತ್ಸೆ ಮುಂದೂಡಿ ಕರ್ತವ್ಯ ಮಾಡಲು ಹೊರಟಿದ್ದೇನೆ ಎಂದು ತನ್ನ ಚಿಕಿತ್ಸೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ತೆರಳುವ ಮೂದಲು ಪ್ರತಿಕ್ರಿಯಿಸಿದ್ದರು.

Comments

Leave a Reply

Your email address will not be published. Required fields are marked *