ನಾನು ಹೇಳಿದ್ದೆಲ್ಲ ನಿಜ ಆಗಿದೆ: ಬಿಎಸ್‍ವೈ

– ಸುಮಲತಾರನ್ನು ನಾವು ಕರೆಯಲ್ಲ

ಬೆಂಗಳೂರು: ನನ್ನ 40 ವರ್ಷದ ರಾಜಕಾರಣದಲ್ಲಿ ಅನುಭವವಾಗಿದೆ. ಹೀಗಾಗಿ ನಾನು ಇಲ್ಲಿಯವರೆಗೆ ಹೇಳಿದ್ದೆಲ್ಲ ನಿಜವಾಗಿದೆ ಎಂದು ತಾನು ಈ ಹಿಂದೆ ಹೇಳಿದ್ದ ಭವಿಷ್ಯದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ನನ್ನ 40 ವರ್ಷದ ರಾಜಕೀಯ ಅನುಭವದಲ್ಲಿ ಇಡೀ ರಾಜ್ಯವನ್ನು ಸುತ್ತಿದ್ದೇನೆ. ಆ ಅನುಭವದ ಆಧಾರದ ಮೇಲೆ ನಾನು ಹೇಳಿದ್ದೇನೆ. ನಾನು ಹೇಳಿದ್ದೆಲ್ಲ ನಿಜವಾಗಿದೆ ಎಂದು ಹೇಳಿದ್ದಾರೆ.

ರಾಜಕೀಯ ಧೃವೀಕರಣದ ಬಗ್ಗೆ ಈಗಲೇ ಹೇಳುವುದಿಲ್ಲ. ಮೇ 29ಕ್ಕೆ ನಾನು ದೆಹಲಿಗೆ ಹೋಗುತ್ತೇನೆ. ದೆಹಲಿಗೆ ಹೋದ ಬಳಿಕ ಮುಂದಿನ ರಾಜಕೀಯ ನಡೆ ತೀರ್ಮಾನ ಮಾಡುತ್ತೇನೆ. ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ಮಾಡಿ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.

ಬಳಿಕ ಮಂಡ್ಯದಲ್ಲಿ ಗೆಲುವು ಸಾಧಿಸಿದ ಪಕ್ಷೇತರ ಅಭ್ಯರ್ಥಿ ಬಗ್ಗೆ ಮಾತನಾಡಿದ ಅವರು, ಸುಮಲತಾ ಅವರು ಬಿಜೆಪಿಗೆ ಬಂದರೆ ನಾವು ಅವರನ್ನು ಸ್ವಾಗತ ಮಾಡುತ್ತೇವೆ. ಆದರೆ ನಾವಾಗಿಯೇ ಸುಮಲತಾ ಅವರನ್ನು ಕರೆಯುವುದಿಲ್ಲ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *