ನೀನು ಉತ್ತಮ ವಿದಾಯಕ್ಕೆ ಅರ್ಹನಾಗಿದ್ದೆ, ಲವ್ ಯೂ ಸಹೋದರ- ರೋಹಿತ್ ಶರ್ಮಾ

ಬೆಂಗಳೂರು: ಸಿಕ್ಸರ್ ಕಿಂಗ್, ಟಿ-20 ಕ್ರಿಕೆಟ್‍ನಲ್ಲಿ ಕೇವಲ 12 ಎಸೆತದಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದ ಎಡಗೈ ಸ್ಫೋಟಕ ಆಟಗಾರ ಯುವರಾಜ್ ಸಿಂಗ್ ಎಲ್ಲ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ. ಯುವರಾಜ್ ಸಿಂಗ್ ಅವರ ವಿದಾಯಕ್ಕೆ ಟೀಂ ಇಂಡಿಯದ ಉಪನಾಯಕ ರೋಹಿತ್ ಶರ್ಮಾ ಬೇಸರ ವ್ಯಕ್ತಪಡಿಸಿದ್ದಾರೆ

ಇಂಗ್ಲೆಂಡಿನಲ್ಲಿ ವಿಶ್ವಕಪ್ ಪಂದ್ಯ ನಡೆಯುತ್ತಿರುವ ಸಂದರ್ಭದಲ್ಲಿ 2011ರ ವಿಶ್ವಕಪ್ ಸರಣಿ ಶ್ರೇಷ್ಠ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿದ್ದ ಯುವರಾಜ್ ಸೋಮವಾರ ಮುಂಬೈ ಖಾಸಗಿ ಹೋಟೆಲಿನಲ್ಲಿ ಸುದ್ದಿಗೋಷ್ಠಿ ನಡೆಸಿ ನಿವೃತ್ತಿ ನಿರ್ಧಾರ ಪ್ರಕಟಿಸಿದರು. ಸಹೋದರನ ವಿದಾಯಕ್ಕೆ ಮನನೊಂದ ರೋಹಿತ್ ಶರ್ಮಾ ಟ್ವೀಟ್ ಮಾಡಿದ್ದು ನೀನು ಉತ್ತಮ ವಿದಾಯಕ್ಕೆ ಅರ್ಹನಾಗಿದ್ದೆ ಎಂದು ಹೇಳಿದ್ದಾರೆ.

ಯುವಿ ವಿದಾಯದ ಕುರಿತು ಟ್ವೀಟ್ ಮಾಡಿರುವ ರೋಹಿತ್ ಶರ್ಮಾ “ನಿನಗೆ ಗೊತ್ತಿಲ್ಲ ನಿನಗೆ ಏನ್ ಸಿಕ್ಕಿತ್ತು ಆದು ಕಳೆದು ಹೋಗಿದೆ. ಲವ್ ಯೂ ಸಹೋದರ, ನೀನು ಉತ್ತಮ ವಿದಾಯಕ್ಕೆ ಅರ್ಹನಾಗಿದ್ದೆ” ಎಂದು ಟ್ವೀಟ್ ಮಾಡಿದ್ದಾರೆ.

17 ವರ್ಷಗಳ ಕಾಲ ಭಾರತದ ಕ್ರಿಕೆಟ್ ತಂಡಕ್ಕೆ ತನ್ನದೇ ಆದ ಉತ್ತಮ ಸೇವೆ ಸಲ್ಲಿಸಿದ್ದಾರೆ. ಈ ರೀತಿಯ ಒಳ್ಳೆಯ ಆಟಗಾರನ್ನು ವಿದಾಯ ಪಂದ್ಯ ನೀಡದೆ ಅವರಿಗೆ ವಿದಾಯ ಹೇಳುವ ಸಮಯ ಬಂದಿದೆ ಅವರು ಉತ್ತಮ ವಿದಾಯ ಪಂದ್ಯಕ್ಕೆ ಅರ್ಹರು ಎಂದು ಹೇಳಿದ್ದಾರೆ.

2019 ರ ವಿಶ್ವಕಪ್‍ನಲ್ಲಿ ಅಡಬೇಕು ಎಂದು ಆಸೆ ಇದ್ದ ಯುವರಾಜ್ ಸಿಂಗ್ ಅವರು, ವೀರೇಂದ್ರ ಸೆಹ್ವಾಗ್, ರಾಹುಲ್ ದ್ರಾವಿಡ್, ವಿ.ವಿ.ಎಸ್ ಲಕ್ಷ್ಮಣ್ ಮತ್ತು ಗೌತಮ್ ಗಂಭೀರ್ ಅವರ ರೀತಿಯಲ್ಲೇ ವಿದಾಯ ಪಂದ್ಯವನ್ನು ಆಡದೇ ತನ್ನ 17 ವರ್ಷದ ಕ್ರಿಕೆಟ್ ಜೀವನಕ್ಕೆ ಸೋಮವಾರ ವಿದಾಯ ಹೇಳಿದರು.

 

2000 ರಲ್ಲಿ ಕೀನ್ಯಾ ವಿರುದ್ಧ ಏಕದಿನ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ಯುವಿ ಇದುವರೆಗೂ 304 ಏಕದಿನ ಪಂದ್ಯಗಳಲ್ಲಿ 8,701 ರನ್ ಸಿಡಿಸಿದ್ದಾರೆ. 2017 ರಲ್ಲಿ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಕೊನೆಯ ಬಾರಿಗೆ ಏಕದಿನ ಪಂದ್ಯವನ್ನಾಡಿದ್ದರು. 2003 ರಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದು, 40 ಪಂದ್ಯಗಳಲ್ಲಿ 1,900 ರನ್ ಗಳಿಸಿದ್ದಾರೆ. 2007 ರಲ್ಲಿ ಮೊದಲ ಟಿ20 ಕ್ರಿಕೆಟ್ ಪಂದ್ಯವನ್ನು ಸ್ಕಾಟ್ ಲ್ಯಾಂಡ್ ವಿರುದ್ಧ ಆಡಿದ್ದು, ಇದುವರೆಗೂ 58 ಪಂದ್ಯಗಳಿಂದ 1,177 ರನ್ ಸಿಡಿಸಿದ್ದಾರೆ. ಉಳಿದಂತೆ ಲೆಗ್ ಸ್ಪಿನ್ ಬೌಲರ್ ಆಗಿ ಟೆಸ್ಟ್, ಏಕದಿನ, ಟಿ20 ಮಾದರಿಯಲ್ಲಿ ಕ್ರಮವಾಗಿ 9, 111, 28 ವಿಕೆಟ್ ಪಡೆದಿದ್ದಾರೆ.

Comments

Leave a Reply

Your email address will not be published. Required fields are marked *