500 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್ – 20ಕ್ಕೂ ಅಧಿಕ ಮಂದಿ ಸಾವು

ಶಿಮ್ಲಾ: ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.

ಈ ಘಟನೆ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಪರ್ವತದ ಕಮರಿಯಲ್ಲಿ ಇಂದು ಸಂಜೆ ಸುಮಾರು 4 ಗಂಟೆಗೆ ನಡೆದಿದೆ. ಈ ಬಸ್ಸಿನಲ್ಲಿ ಸುಮಾರು 50ಕ್ಕೂ ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸುಮಾರು 50ಕ್ಕೂ ಜನರಿದ್ದ ಖಾಸಗಿ ಬಸ್( ಹೆಚ್‍ಪಿ 66-7065) ಬಂಜಾರದಿಂದ ಗಡಗುಶೈನಿ ಪ್ರದೇಶಕ್ಕೆ ತೆರಳುತ್ತಿತ್ತು. ಈ ವೇಳೆ ಬಂಜಾರ ಕುಲ್ಲುದ ಬಂಜಾರ್ ಪ್ರದೇಶದ ಬಳಿ ಚಾಲಕನ ನಿಯಂತ್ರಣ ತಪ್ಪಿ 500 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಪರಿಣಾಮ ಸ್ಥಳದಲ್ಲಿಯೇ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ.

ಈ ಅಪಘಾತದ ಮಾಹಿತಿ ತಿಳಿದು ಪೊಲೀಸರು ಮತ್ತು ರಕ್ಷಣಾ ಪಡೆಯವರು ಸ್ಥಳಕ್ಕೆ ದೌಡಾಯಿಸಿದ್ದು, ಸುಮಾರು 35ಕ್ಕೂ ಅಧಿಕ ಮಂದಿಗೆ ಗಾಯಗಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ 12 ಮಹಿಳೆಯರು, 10 ಮಕ್ಕಳು ಮತ್ತು 10 ಮಂದಿ ಪುರುಷರು ಇದ್ದಾರೆ ಎಂದು ತಿಳಿದು ಬಂದಿದೆ.

ಹಲವಾರು ಪ್ರಯಾಣಿಕರು ಬಸ್ಸಿನ ಟಾಪ್‍ನಲ್ಲಿ ಕುಳಿತು ಪ್ರಯಾಣಿಸುತ್ತಿದ್ದರು. ಸದ್ಯಕ್ಕೆ 15 ಪ್ರಯಾಣಿಕರ ಮೃತದೇಹ ಪತ್ತೆಯಾಗಿದ್ದು, ಬಿದ್ದ ರಭಸಕ್ಕೆ ಬಸ್ ನಜ್ಜುಗುಜ್ಜಾಗಿದೆ ಎಂದು ಇನ್ಸ್ ಪೆಕ್ಟರ್ ತಿಳಿಸಿದ್ದಾರೆ. ಸದ್ಯಕ್ಕೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Comments

Leave a Reply

Your email address will not be published. Required fields are marked *