ಕೋಲಾರ: ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿ ಗೇಟ್ ಬಳಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಐನೋರ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿ ರಾಮಪ್ಪ (70) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ರಾಮಪ್ಪನ ಪತ್ನಿ ಸರೋಜಮ್ಮಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಂಬಂಧಿಕರ ಮದುವೆ ಇದ್ದ ಕಾರಣ ಬಂಗಾರಪೇಟೆಗೆ ಹೋಗುತ್ತಿದ್ದ ಈ ದಂಪತಿಯ ದ್ವಿಚಕ್ರ ವಾಹನಕ್ಕೆ, ರಭಸದಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply