ಸೆಪ್ಟೆಂಬರ್ 7ಕ್ಕೆ ದರ್ಶನ್‍ರಿಂದ ‘ಟಕ್ಕರ್’ ಆಡಿಯೋ ಬಿಡುಗಡೆ

ಕೆ.ಎನ್. ನಾಗೇಶ್ ಕೋಗಿಲು ಎಸ್.ಎಲ್.ಎನ್. ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿರುವ ಎರಡನೇ ಚಿತ್ರ ಟಕ್ಕರ್ ಚಿತ್ರದ ಹಾಡುಗಳು ಸೆಪ್ಟೆಂಬರ್ 7ರಂದು ರಿಲೀಸ್ ಆಗಲಿದೆ. ನಾಯಕ ನಟ ಮನೋಜ್ ಅವರ ಸೋದರ ಮಾವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅದ್ಧೂರಿ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ.


‘ಟಕ್ಕರ್’ ನಲ್ಲಿ ಮೂರು ಹಾಡುಗಳಿವೆ. ಡಾ.ವಿ.ನಾಗೇಂದ್ರ ಪ್ರಸಾದ್ ಎರಡು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. ಡ್ಯುಯೆಟ್ ಹಾಡನ್ನು ವಿಜಯಪ್ರಕಾಶ್ ಮತ್ತು ಅನುರಾಧಾ ಭಟ್ ಹಾಡಿದರೆ, ಹೀರೋ ಇಂಟ್ರಡಕ್ಷನ್ ಸಾಂಗ್ ಅನ್ನು ಶಶಾಂಕ್ ಶೇಷಗಿರಿ ಹಾಡಿದ್ದಾರೆ. ಸ್ಫೂರ್ತಿದಾಯಕ ಗೀತೆಯನ್ನು ಯುವ ಹಾಡುಗಾರ ಸಂಜಿತ್ ಹೆಗ್ಡೆ ಹಾಡಿದ್ದಾರೆ. ವಿಜಯ ಪ್ರಕಾಶ್ ಹಾಡಿರುವ ಹಾಡನ್ನು ಮಲೇಶಿಯಾದಲ್ಲಿ ಚಿತ್ರೀಕರಿಸಲಾಗಿದೆ. ವಿಶೇಷವೆಂದರೆ ಈ ಚಿತ್ರದ ಆರಂಭದಲ್ಲಿ ಬರುವ ನಾಯಕನ ಇಂಟ್ರಡಕ್ಷನ್ ಹಾಡಿನಲ್ಲೇ ಫೈಟ್ ಅನ್ನೂ ಅಳವಡಿಸಲಾಗಿದೆ.


‘ಆನೆ ನಡೆದಿದ್ದೆ ದಾರಿ ಅಲ್ವೇನ್ರಿ ಯಾರು ಕೊಡಬೇಡಿ ಟಕ್ಕರ್’ ಎನ್ನುವ ಸಾಲಿನಿಂದ ಆರಂಭವಾಗುವ ಹಾಡಿನಲ್ಲಿ ಮೋಹನ್ ಅವರ ಕೊರಿಯೋಗ್ರಫಿ ಮತ್ತು ಡಿಫರೆಂಟ್ ಡ್ಯಾನಿ ಅವರ ಸಾಹಸ ಸಮ್ಮಿಲನಗೊಂಡಿದೆ. ಥ್ರಿಲ್ಲರ್ ಮತ್ತು ಸಾಹಸಪ್ರಧಾನ ಅಂಶಗಳನ್ನು ಒಳಗೊಂಡಿದೆ.


ವಿ. ರಘುಶಾಸ್ತ್ರಿ ನಿರ್ದೇಶಿಸಿರುವ ಈ ಚಿತ್ರಕ್ಕೆ ಕದ್ರಿ ಮಣಿಕಾಂತ್ ಸಂಗೀತ, ಡಾ.ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ, ಡಿಫರೆಂಟ್ ಡ್ಯಾನಿ ಸಾಹಸ, ವಿಲಿಯಮ್ಸ್ ಡೇವಿಡ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಮೋಹನ್ ನೃತ್ಯ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ, ಗುರುರಾಜ್ ದೇಸಾಯಿ ಸಂಭಾಷಣೆ ಈ ಚಿತ್ರಕ್ಕಿದೆ. ಮನೋಜ್ ಕುಮಾರ್ ಮತ್ತು ರಂಜನಿರಾಘವನ್, ಕೆ.ಎಸ್. ಶ್ರೀಧರ್, ಶಂಕರ್ ಅಶ್ವಥ್, ಸುಮಿತ್ರಾ, ಭಜರಂಗಿ ಖ್ಯಾತಿಯ ಸೌರವ್ ಲೋಕಿ, ಸಾಧು ಕೋಕಿಲಾ, ಲಕ್ಷ್ಮಣ್ ಶಿವಶಂಕರ್, ಅಶ್ವಿನ್ ಹಾಸನ್, ಕುರಿ ಸುನಿಲ್, ಜೈಜಗದೀಶ್ ಮುಂತಾದವರ ತಾರಾಬಳಗವಿದೆ.

Comments

Leave a Reply

Your email address will not be published. Required fields are marked *