ಬೆಂಗಳೂರು: ಮನೆಯೊಂದರಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಬೆಂಗಳೂರಿನ ಬೇಗೂರು ನಡೆದಿದೆ.
ನಂದಿನಿ ಮೃತ ದುರ್ದೈವಿ. ಈಕೆ ಚಾಮುಂಡೇಶ್ವರಿ ನಗರದ ನಿವಾಸಿಯಾಗಿದ್ದು, 10 ವರ್ಷಗಳ ಹಿಂದೆ ಮಧು ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಪತಿ ಮಧು, ನಂದಿನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದು, ಶವ ಬಿಟ್ಟು ಮನೆಯಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಪೋಷಕರು ಹಲವು ಬಾರಿ ನಂದಿನಿಗೆ ಕರೆ ಮಾಡಿದ್ದಾರೆ. ಆದರೆ ಮನೆಯಲ್ಲಿ ಯಾರು ಕರೆ ಸ್ವೀಕರಿಸಿಲ್ಲ. ಇದರಿಂದ ಗಾಬರಿಗೊಂಡು ಪೋಷಕರು ಮನೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕಳೆದ ಒಂದು ವಾರದ ಹಿಂದೆ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಸದ್ಯ ಘಟನಾ ಸ್ಥಳಕ್ಕೆ ಬೇಗೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಮೃತ ನಂದಿನಿ ಪತಿ ಮಧುವಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Leave a Reply