ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ

ಮೈಸೂರು: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತವಾಗಿದೆ.

ಚಾಮುಂಡಿಬೆಟ್ಟದ ವ್ಯೂವ್ ಪಾಯಿಂಟ್ ಬಳಿಯಲ್ಲಿ ಭೂಮಿ ಕುಸಿದಿದ್ದರಿಂದ ರಸ್ತೆಯೂ ಕುಸಿತವಾಗಿದೆ. ನಂದಿ ವಿಗ್ರಹದ ಕಡೆಗೆ ಸಾಗುವ ಮಾರ್ಗದ ಸನಿಹದಲ್ಲಿಯೇ ಈ ವ್ಯೂವ್ ಪಾಯಿಂಟ್ ಇದೆ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನರು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿಯ ಬೆಟ್ಟ ಕುಸಿತ ಕಾಣುತ್ತಿದ್ದ ಜನರು ಭಯಬೀತರಾಗಿದ್ದಾರೆ. ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಬೀಳುವ ಸ್ಥಿತಿಯಲ್ಲಿರುವ ಬೃಹತ್ ಬಂಡೆಗಳನ್ನು ಸ್ಥಳಾಂತರಿಸುತ್ತಿದೆ.

Comments

Leave a Reply

Your email address will not be published. Required fields are marked *