ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

ಮಂಗಳೂರು: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂಭ್ರಮ ಕಳೆಗಟ್ಟಿದೆ. ಕಾರ್ತಿಕ ಮಾಸದಲ್ಲಿ ಪ್ರತಿ ವರ್ಷ ಜರಗುವ ಉತ್ಸವಕ್ಕೆ ದೇಶ- ವಿದೇಶಗಳ ಸಾವಿರಾರು ಭಕ್ತರು ಸಾಕ್ಷಿಯಾಗಿದ್ದಾರೆ.

ಈ ಬಾರಿ ನ.22ರಿಂದ ಲಕ್ಷದೀಪೋತ್ಸವ ಆರಂಭಗೊಂಡಿದ್ದು, ಉತ್ಸವದ ಪ್ರಯುಕ್ತ ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿತ್ತು. 87ನೇ ವರ್ಷದ ಸರ್ವಧರ್ಮ ಸಮ್ಮೇಳನವನ್ನು ಲೋಕಸಭಾ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಉದ್ಘಾಟಿಸಿದರು.

ಸಾಹಿತ್ಯ ಸಮ್ಮೇಳನವನ್ನು ಡಿಸಿಟಿ ಅಶ್ವಥ್ ನಾರಾಯಣ ಉದ್ಘಾಟಿಸಿದರು. ಮಂಗಳವಾರ ರಾತ್ರಿ ಲಕ್ಷ ದೀಪೋತ್ಸವದ ಅಂಗವಾಗಿ ರಾಜ್ಯದ ವಿವಿಧ ಕಡೆಗಳಿಂದ ಭಕ್ತರು ಪಾದಯಾತ್ರೆಯಲ್ಲಿ ಆಗಮಿಸಿದ್ದಾರೆ. ರೈತರು ತಮ್ಮ ಕೃಷಿ ಉತ್ಪನ್ನಗಳಾದ ಅಕ್ಕಿ, ತರಕಾರಿ, ಬೇಳೆ ಕಾಳುಗಳನ್ನು ದೇವರಿಗೆ ಕಾಣಿಕೆಯಾಗಿ ಅರ್ಪಿಸಿದರು.

ಇಡೀ ಧರ್ಮಸ್ಥಳ ಕ್ಷೇತ್ರದ ಆವರಣ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದು ಭಕ್ತರನ್ನು ಅದ್ಧೂರಿಯಾಗಿ ಆಕರ್ಷಿಸುತ್ತಿದೆ.

 

Comments

Leave a Reply

Your email address will not be published. Required fields are marked *