ಬಿಜೆಪಿ ಒಂದೊಂದೇ ರಾಜ್ಯದಿಂದ ಕಾಣೆ ಆಗ್ತಿದೆ: ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಮುಕ್ತ ಭಾರತ ಮಾಡ್ತೀನಿ ಎಂದು ಹೇಳಿದ್ದ ಬಿಜೆಪಿ ಒಂದೊಂದೇ ರಾಜ್ಯದಿಂದ ಕಾಣೆಯಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ. ಟ್ವಿಟ್ಟರ್ ನಲ್ಲಿ ಸಾಲು ಟ್ವೀಟ್ ಗಳ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಟ್ವೀಟ್ 1: ಹೊಸಕೋಟೆಯನ್ನು ಮಾದರಿ ತಾಲೂಕು ಮಾಡ್ತೀನಿ ಎಂದು ಹೇಳುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ, ಪ್ರವಾಹದಲ್ಲಿ ಆಸ್ತಿಪಾಸ್ತಿ ಕಳೆದುಕೊಂಡು ಬೀದಿಯಲ್ಲಿ ಬದುಕು ಸಾಗಿಸುತ್ತಿರುವ ಜನ ಮರೆತು ಹೋಗಿದ್ದಾರೆ. ಅವರ ಬದುಕು ಸರಿ ಮಾಡೋದು ಯಾವಾಗ? ಹುಸಿ ಭರವಸೆ, ಸುಳ್ಳು ಜಾಹೀರಾತು ಜನರ ಹೊಟ್ಟೆ ತುಂಬಿಸುತ್ತಾ?

ಟ್ವೀಟ್ 2: ಮಹಾರಾಷ್ಟ್ರ, ಹರಿಯಾಣದ ಚುನಾವಣಾ ಫಲಿತಾಂಶವನ್ನು ಮರೆತು ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಭ್ರಮೆಯಲ್ಲಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಮಾಡ್ತೀನಿ ಅಂದವರೆಲ್ಲ ಅವರೇ ನಿಧಾನವಾಗಿ ಒಂದೊಂದೆ ರಾಜ್ಯಗಳಲ್ಲಿ ಕಣ್ಮರೆಯಾಗುತ್ತಿದ್ದಾರೆ. ದೇಶದ ಜನಕ್ಕೆ ಯಾರು ತಮ್ಮ ಹಿತ ಕಾಯುವವರು ಎಂದು ಕ್ರಮೇಣ ಅರ್ಥವಾಗುತ್ತಿದೆ.

ಟ್ವೀಟ್ 3: ಕೇಂದ್ರದಿಂದ ಬರಬೇಕಿದ್ದ ಜಿಎಸ್‍ಟಿ ಸಂಗ್ರಹಣೆಯ ರಾಜ್ಯದ ಪಾಲು ರೂ.5,600 ಕೋಟಿ ಹಣ ಬಂದಿಲ್ಲ. ಬಿಜೆಪಿ ಅವರಿಗೆ ಆರ್ಥಿಕ ನಿರ್ವಹಣೆಯ ಜ್ಞಾನವಿಲ್ಲ. ಕುರ್ಚಿ ಮೇಲೆ ಕೂತು ಅಧಿಕಾರ ಉಳಿಸಿಕೊಳ್ಳಲು ಭಜನೆ ಮಾಡುವ ಬದಲು, ಕೇಂದ್ರದ ಬಳಿ ಗಟ್ಟಿ ಮಾತನಾಡಿದರೆ ಸರ್ಕಾರಿ ನೌಕರರಿಗೆ ಸಂಬಳವೂ ಸಿಗುತ್ತೆ, ನೆರೆ ಪರಿಹಾರದ ಹಣವೂ ಬರುತ್ತದೆ ಎಂದು ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *