ಮೈಸೂರು: ಹುಣಸೂರು ಕ್ಷೇತ್ರದ ಮತದಾರರು ಕೈಹಿಡಿಯುವ ನಂಬಿಕೆ ಇದೆ. ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಹುಣಸೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೆಚ್ ವಿಶ್ವನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಚುನಾವಣೆ ಮತ ಎಣಿಕೆಯಿದೆ. ಕೇಂದ್ರಕ್ಕೆ ಹೋಗುವ ಮುನ್ನ ಇಷ್ಟ ದೇವತೆಗಳಿಗೆ ಪೂಜೆ ಮಾಡುತ್ತಿದ್ದೇನೆ. ಹುಣಸೂರು ಮತದಾರರು ನನಗೆ ಆಶೀರ್ವಾದ ಮಾಡಿದ್ದಾರೆ. ಗೆಲ್ಲುವ ವಿಶ್ವಾಸವಿದೆ ಎಂದರು.

ಇದೇ ವೇಳೆ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ವಿಶ್ವನಾಥ್ ಸೋತ್ರೆ ಜಗತ್ತು ಮುಳುಗುತ್ತಾ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಶ್ರೀನಿವಾಸ್ ಪ್ರಸಾದ್ ಹೇಳಿಕೆಗೆ ನೋ ಕಮೆಂಟ್ಸ್. ಗೆಲುವಿನ ಅಂತರ ಗೊತ್ತಿಲ್ಲ. ಆದರೆ ಗೆದ್ದೇ ಗೆಲ್ತೀನಿ ಎಂದರು. ಇತ್ತ ಗೆದ್ದವರಿಗಷ್ಟೆ ಮಂತ್ರಿ ಸ್ಥಾನ ಈಶ್ವರಪ್ಪ ಹೇಳಿಕೆ ವಿಚಾರದ ಬಗ್ಗೆಯೂ ನೋ ಕಾಮೆಂಟ್ ಎಂದು ಹೇಳಿದರು. ಇದನ್ನೂ ಓದಿ: ಅನರ್ಹರು ಸೋತರೆ ಸಚಿವ ಸ್ಥಾನ ಇಲ್ಲ: ಈಶ್ವರಪ್ಪ
ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ನಡೆದಿದ್ದ ಮತದಾನದ ಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಕೆಡವಿ ಅನರ್ಹ ಎನಿಸಿಕೊಂಡಿರುವ 13 ಮಂದಿಯಲ್ಲಿ ಯಾರನ್ನ ಮತದಾರರು ಅನರ್ಹರನ್ನಾಗಿ ಉಳಿಸ್ತಾರೆ, ಯಾರಿಗೆ ಅರ್ಹ ಪಟ್ಟ ಕೊಟ್ಟು ಮತ್ತೆ ವಿಧಾನಸಭೆಗೆ ಕಳಿಸ್ತಾರೆ ಅನ್ನೋದು ಗೊತ್ತಾಗಲಿದೆ. ಇದನ್ನೂ ಓದಿ: ಹಳ್ಳಿಹಕ್ಕಿ ಸೋತ್ರೆ ಜಗತ್ತು ಮುಳುಗುತ್ತಾ- ಶ್ರೀನಿವಾಸ್ ಪ್ರಸಾದ್ ಪ್ರಶ್ನೆ

ಉಪ ಚುನಾವಣೆಯಲ್ಲಿ ರಾಣೇಬೆನ್ನೂರಿನ ಮಾಜಿ ಶಾಸಕ ಆರ್ ಶಂಕರ್ ಮತ್ತು ಶಿವಾಜಿನಗರದ ಮಾಜಿ ಶಾಸಕ ರೋಷನ್ಬೇಗ್ ಸ್ಪರ್ಧೆ ಮಾಡಿಲ್ಲ. ಹೊಸಕೋಟೆ, ವಿಜಯನಗರ, ಗೋಕಾಕ್, ಅಥಣಿ, ಕಾಗವಾಡದಲ್ಲಿ ಎದ್ದಿದ್ದ ಬಂಡಾಯದ ಬಿಸಿ ವಲಸೆ ಬಂದು ಬಿಜೆಪಿ ಚಿಹ್ನೆಯಡಿ ಅಖಾಡಕ್ಕಿಳಿದ ಅನರ್ಹರಿಗೆ ಆಘಾತ ಕೊಡುತ್ತೋ ಅಥವಾ ಬಂಡಾಯಕ್ಕೆ ಸೆಡ್ಡು ಹೊಡೆದು ಗೆದ್ದೇ ಬಿಡುತ್ತಾರಾ ಅನ್ನೋ ಪ್ರಶ್ನೆಗಳಿಗೆ ಬೆಳಗ್ಗೆ 11 ಗಂಟೆಯಷ್ಟೊತ್ತಿಗೆ ಬಹುತೇಕ ಸ್ಪಷ್ಟ ಉತ್ತರ ಸಿಗಲಿದೆ.

Leave a Reply