ಶಾಲೆಗಳಲ್ಲಿ ಇನ್ಮುಂದೆ ಮಾತೆ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಇನ್ಮುಂದೆ ಭಾರತದ ಪ್ರಥಮ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆಗೆ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.

ಮುಂದಿನ ವರ್ಷ ಎಂದರೆ 2020ರಿಂದಲೇ ಮಾತೆ ಸಾವಿತ್ರಿ ಬಾಯಿ ಫುಲೆ ಜಯಂತಿ ಆಚರಣೆಗೆ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಜಯಂತಿ ಆಚರಣೆ ಸಂಬಂಧ ಆದೇಶ ಹೊರಡಿಸುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಜನವರಿ 3ರಂದು ರಾಜ್ಯದ ಶಾಲೆಗಳಲ್ಲಿ ಮಾತೆ ಸಾವಿತ್ರಿ ಬಾಯಿ ಫುಲೆ ಜಯಂತಿ ಆಚರಣೆ ಮಾಡಲಾಗುತ್ತೆ.

ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಫುಲೆ ಶಿಕ್ಷಕರ ಸಂಘವೂ ಜಯಂತಿ ಆಚರಣೆ ಮಾಡುವಂತೆ ಸಚಿವ ಸುರೇಶ್ ಕುಮಾರ್‍ಗೆ ಮನವಿ ಮಾಡಿದರು. ಮನವಿಗೆ ಸ್ಪಂದಿಸಿರುವ ಸಚಿವರು ಜಯಂತಿ ಆಚರಣೆಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಸಾವಿತ್ರಿ ಬಾಯಿ ಫುಲೆ ಜಯಂತಿ ಆಚರಣೆ ಮಾಡುತ್ತೆ.

1831 ಜನವರಿ 3ರಂದು ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕುಗ್ರಾಮದಲ್ಲಿ ಜನಿಸಿದ ಸಾವಿತ್ರಿ ಬಾಯಿ ಫುಲೆ ಮಹಿಳಾ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟವರು. ಮನೆಯಲ್ಲೆ ಶಾಲೆ ತೆರೆದು ಅಕ್ಷರ ಕ್ರಾಂತಿ ಕಹಳೆ ಊದಿದರು. ಬ್ರಿಟಿಷರಿಂದಲೇ ಅತ್ಯುತ್ತಮ ಶಿಕ್ಷಕಿ ಎಂದು ಬಿರುದು ಪಡೆದರು. ಅಲ್ಲದೆ ಭಾರತ ಪ್ರಪ್ರಥಮ ಮಹಿಳಾ ಶಿಕ್ಷಕಿ ಎಂದು ಬಿರುದು ಪಡೆದ ಸಾಧಕಿ ಮಾತೆ ಸಾವಿತ್ರಿಬಾಯಿ ಫುಲೆ.

Comments

Leave a Reply

Your email address will not be published. Required fields are marked *