ನಾಳೆ ಕೊಡಗಿನಲ್ಲಿ ಬಂದ್ ಇಲ್ಲ, ಪ್ರತಿಭಟನೆಗೆ ಮಾತ್ರ ಸೀಮಿತ

ಮಡಿಕೇರಿ: ದೇಶಾದ್ಯಂತ ನಾಳೆ ಕಾರ್ಮಿಕ ಸಂಘಟನೆಗಳು ಕರೆ ನೀಡಿರೊ ಭಾರತ್ ಬಂದ್ ಗೆ ಕೊಡಗು ಜಿಲ್ಲೆಯಲ್ಲಿ ಹತ್ತಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಸಿಐಟಿಯು, ಎಐಟಿಯುಸಿ ಕಾರ್ಮಿಕ ಸಂಘಟನೆಯಿಂದ ನಾಳೆ ಬೃಹತ್ ಪ್ರತಿಭಟನೆ ಮಡಿಕೇರಿ ನಗರದಲ್ಲಿ ನಡೆಯಲಿದೆ.

ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಸರ್ಕಾರಿ ಆಸ್ಪತ್ರೆ ಸಿಬ್ಬಂದಿ, ಅಂಗನವಾಡಿ, ಬಿಸಿಯೂಟ ಸಿಬ್ಬಂದಿ, ಬಿಎಸ್‍ಎನ್‍ಎಲ್ ಗುತ್ತಿಗೆ ನೌಕರರು, ಎಲ್‍ಐಸಿ ಸಿಬ್ಬಂದಿ, ಕಟ್ಟಡ ಕಾರ್ಮಿಕರು, ಕಾಫಿ ತೋಟದ ಕಾರ್ಮಿಕರು, ಅಮಾಲಿ ನೌಕರರ ಸಂಘದಿಂದ ಈಗಾಗಲೇ ಬಂದ್‍ಗೆ ಬೆಂಬಲ ಘೋಷಣೆಯಾಗಿದೆ. ಆದರೆ ನಾಳೆ ಎಂದಿನಂತೆ ಶಾಲಾ ಕಾಲೇಜುಗಳು ಇರಲಿದ್ದು, ಪೆಟ್ರೋಲ್ ಬಂಕ್, ಹಾಲಿನ ಬೂತ್, ಮೆಡಿಕಲ್ ಸ್ಟೋರ್ ಎಲ್ಲವೂ ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಖಾಸಗಿ ಬಸ್ ಮಾಲೀಕರ ಸಂಘದವರು ಎಂದಿನಂತೆ ಬಸ್ಸು ಸಂಚಾರ ನಡೆಸಲಿದ್ದಾರೆ. ಆದರೆ ಅಟೋ ಚಾಲಕರು ಪರಿಸ್ಥಿತಿ ನೋಡಿಕೊಂಡು ಆಟೋ ಚಾಲನೆ ಮಾಡುತ್ತೇವೆ ಎಂದಿದ್ದಾರೆ. ಇತ್ತ ವಿರಾಜಪೇಟೆ ತಾಲೂಕಿನಲ್ಲಿ ಕಾರ್ಮಿಕ ವಲಯಗಳು ಜಾಸ್ತಿ ಇರುವ ಕಾರಣ ಗ್ರಾಮೀಣ ಭಾಗಗಳಿಂದ ಸಿದ್ದಾಪುರ ಕರಡಿಗೋಡು, ನೆಲ್ಲಿಹುದಿಕೇರಿ ಕುಟ್ಟ ಭಾಗದಲ್ಲಿ ಅಲ್ಲಿಯ ಪರಿಸ್ಥಿತಿಯನ್ನು ಅರಿತು ಆಟೋ ಚಾಲಕರು ನಿಲ್ಲಸಬಹುದು ಎಂದು ಆಟೋ ಚಾಲಕ ಜಿಲ್ಲಾಧ್ಯಕ್ಷ ಮೇದಪ್ಪ ಅವರು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *