ಹಂಪಿ ಉತ್ಸವಕ್ಕಾಗಿ ಜ.10-11 ರಂದು ಉಚಿತ ಬಸ್ ಸಂಚಾರ

ಬಳ್ಳಾರಿ: ಸಾರ್ವಜನಿಕರ ಅನುಕೂಲಕ್ಕಾಗಿ ಹಂಪಿ ಉತ್ಸವಕ್ಕೆ ಉಚಿತ ಬಸ್ ಬಿಡಲು ಬಳ್ಳಾರಿ ಜಿಲ್ಲಾಡಳಿತ ನಿರ್ಧಾರ ಮಾಡಿದೆ.

ವಿಶ್ವವಿಖ್ಯಾತ ಹಂಪಿ ಉತ್ಸವವು ಇದೇ ಜನವರಿ 10 ಮತ್ತು 11 ರಂದು ಅದ್ಧೂರಿಯಾಗಿ ನಡೆಯಲಿದೆ. ಹೀಗಾಗಿ ಹಂಪಿ ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ವೀಕ್ಷಿಸಲಿ ಎಂಬ ಸದುದ್ದೇಶದಿಂದ ಜಿಲ್ಲಾಡಳಿತ ಮತ್ತು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಈ ವ್ಯವಸ್ಥೆ ಮಾಡಿದೆ. ಹೊಸಪೇಟೆ ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮಗಳಿಂದ ಉಚಿತ ಬಸ್ ಬಿಡಲು ನಿರ್ಧಾರ ಮಾಡಲಾಗಿದೆ.

ಜನವರಿ 10 ಮತ್ತು 11 ರಂದು ಹೊಸಪೇಟೆಯ ವಿವಿಧ ಬಡಾವಣೆಗಳಿಂದ ಹಾಗೂ ಹೊಸಪೇಟೆಯ ಕೇಂದ್ರ ಬಸ್ ನಿಲ್ದಾಣದಿಂದ ಹಂಪಿ ಕಡೆಗೆ ಹೋಗುವ ಹಾಗೂ ಮರಳಿ ಕೇಂದ್ರ ಬಸ್ ನಿಲ್ದಾಣಕ್ಕೆ ಮತ್ತು ವಿವಿಧ ಬಡಾವಣೆಗಳಿಗೆ ಉಚಿತ ಬಸ್ ಸಂಚಾರ ಕಲ್ಪಿಸಲಾಗಿದೆ. ಇದರ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಉತ್ಸವ ವೀಕ್ಷಿಸಬೇಕು ಎಂದು ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಜನರಲ್ಲಿ ಮನವಿ ಮಾಡಿದೆ.

Comments

Leave a Reply

Your email address will not be published. Required fields are marked *