ಪದವಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ನೀಡುವಂತೆ ಆಗ್ರಹ

ಬೆಳಗಾವಿ: ಸರ್ಕಾರಿ ಪದವಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ನೀಡುವಂತೆ ಒತ್ತಾಯಿಸಿ ಸೋಮವಾರ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ರವಾನಿಸಿದರು.

ರಾಜ್ಯದಲ್ಲಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಲ್ಯಾಪ್‍ಟಾಪ್ ನೀಡುತ್ತಿದೆ. ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಉನ್ನತ ಶಿಕ್ಷಣ ನಿರ್ದೇಶಕ ಮತ್ತು ಕಾಲೇಜಿನ ಪ್ರಾಚಾರ್ಯರರು ಕೇವಲ ಪ್ರಥಮ ವರ್ಷ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ನೀಡುತ್ತಿದ್ದಾರೆ. ಎಲ್ಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ನೀಡಬೇಕೆಂದು ಆಗ್ರಹಿಸಿದರು.

ಕಿರಣ ದುಶಾಂದಾರ, ಕಿಶೋರಿ ಪಾಟೀಲ, ಸಂದ್ಯಾ ಹೆಗಡೆ, ರಾಕೇಶ ಬಲಭೀಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *