ನಿರ್ಭಯಾ ಹಂತಕರಿಗೆ ಮಾರ್ಚ್ 3ರಂದು ಗಲ್ಲು

ನವದೆಹಲಿ: ನಿರ್ಭಯಾ ಪ್ರಕರಣದ ದೋಷಿಗಳಿಗೆ ಮಾರ್ಚ್ 3ರಂದು ಡೆತ್ ವಾರೆಂಟ್ ಜಾರಿ ಮಾಡಲಾಗಿದೆ. ದೆಹಲಿ ಪಟಿಯಾಲಾ ಕೋರ್ಟ್ ಮಾರ್ಚ್ 3ರಂದು ಬೆಳಗ್ಗೆ 6 ಗಂಟೆಗೆ ಡೆತ್ ವಾರೆಂಟ್ ನೀಡಿ ಆದೇಶಿಸಿದೆ.

ಮೂರನೇ ಬಾರಿಗೆ ಪಟಿಯಾಲಾ ಕೋರ್ಟ್ ಡೆತ್ ವಾರೆಂಟ್ ಜಾರಿ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ದೋಷಿಗಳ ಪರ ವಕೀಲ ಎ.ಪಿ.ಸಿಂಗ್, ನಮ್ಮ ಮುಂದೆ ಕಾನೂನಿನ ಅವಕಾಶಗಳಿವೆ. ರಾಜಕೀಯ ನಾಯಕರ ಒತ್ತಡದಿಂದಾಗಿ ಗಲ್ಲು ಶಿಕ್ಷೆಯ ದಿನಾಂಕ ಪ್ರಕಟಿಸಲಾಗಿದೆ ಎಂದಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ನಿರ್ಭಯಾ ತಾಯಿ ಆಶಾದೇವಿ, ಮಾರ್ಚ್ 3ರಂದು ದೋಷಿಗಳಿಗೆ ಗಲ್ಲು ಆಗಲಿದೆ ಎಂಬ ನಂಬಿಕೆ ನನಗಿದೆ. ವಿಳಂಬವಾಗಿದ್ದು ನಿಜ, ಆದ್ರೆ ನ್ಯಾಯ ಸಿಕ್ಕಿದೆ ಎಂದಿದ್ದಾರೆ. ಮಗಳಿಗಾಗಿ ಇಷ್ಟು ದಿನ ಹೋರಾಟ ನಡೆಸಿದ್ದೇನೆ. ಪುತ್ರಿಯ ನ್ಯಾಯ ಕೊಡಿಸುವುದು ನನ್ನ ಗುರಿ ಎಂದು ಹೇಳಿದರು.

2012ರ ಡಿ. 16ರಂದು ದೆಹಲಿಯಲ್ಲಿ 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದು, ಕೊಲೆ ಮಾಡಿ ದುರುಳರು ವಿಕೃತಿ ಮೆರೆದಿದ್ದರು. ಈ ಪ್ರಕರಣ ಸಂಬಂಧ ರಾಮ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ಮುಕೇಶ್ ಸಿಂಗ್ ಬಂಧಿಸಲಾಗಿತ್ತು. ಆದರೆ 2013ರ ಮಾರ್ಚ್ ನಲ್ಲಿ ತಿಹಾರ್ ಜೈಲಿನಲ್ಲಿಯೇ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದನು. 2012ರಲ್ಲಿ ನಡೆದಿದ್ದ ಈ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಅತ್ಯಾಚಾರಿಗಳ ವಿರುದ್ಧ ಸಾರ್ವಜನಿಕರು ಹೋರಾಟ, ಪ್ರತಿಭಟನೆಗಳನ್ನು ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ, ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತನ್ನಿ ಎಂಬ ಕೂಗು ಕೇಳಿಬಂದಿತ್ತು.

Comments

Leave a Reply

Your email address will not be published. Required fields are marked *