ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಾಹುಬಲಿ ಎಂಬುದಾಗಿ ತಮ್ಮನ್ನು ತಾವೇ ಬಿಂಬಿಸಿಕೊಂಡಿದ್ದಾರೆ.
ಸೋಮವಾರ ಮತ್ತು ಮಂಗಳವಾರ ಭಾರತದ ಪ್ರವಾಸದಲ್ಲಿರುವ ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣ ಅದರಲ್ಲೂ ಟ್ವಿಟ್ಟರ್ ನಲ್ಲಿ ಹೆಚ್ಚು ಸಕ್ರೀಯರಾಗಿದ್ದಾರೆ.
ಟ್ವಿಟ್ಟರ್ ನಲ್ಲಿ ಅಭಿಮಾನಿಯೊಬ್ಬರು ರಾಜಮೌಳಿ ನಿರ್ದೇಶನದ ಬಾಹುಬಲಿ ಚಿತ್ರದ ಹಾಡಿಗೆ ಡೊನಾಲ್ಡ್ ಟ್ರಂಪ್ ಚಿತ್ರವನ್ನು ಸೇರಿಸಿ ವಿಡಿಯೋ ಅಪ್ಲೋಡ್ ಮಾಡಿ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಬಾಲಿವುಡ್ ಚಿತ್ರಕ್ಕೆ ‘ಗ್ರೇಟ್’ ಎಂದ ಟ್ರಂಪ್
Look so forward to being with my great friends in INDIA! https://t.co/1jdk3AW6fG
— Donald J. Trump (@realDonaldTrump) February 22, 2020
ಈ ಟ್ವೀಟ್ ಟ್ರಂಪ್ ಅವರನ್ನು ಆಕರ್ಷಿಸಿದೆ. ಅಷ್ಟೇ ಅಲ್ಲದೇ ಈ ಟ್ವೀಟ್ ಅನ್ನು ರಿಟ್ವೀಟ್ ಮಾಡಿ, ನನ್ನ ಸ್ನೇಹಿತ ಭಾರತವನ್ನು ನೋಡಲು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಈ ಟ್ವೀಟ್ ಅನ್ನು 31 ಸಾವಿರಕ್ಕೂ ಅಧಿಕ ಮಂದಿ ರಿಟ್ವೀಟ್ ಮಾಡಿದ್ದರೆ, 1.17 ಲಕ್ಷ ಮಂದಿ ಮೆಚ್ಚುಗೆ ಸೂಚಿಸಿದ್ದಾರೆ. 10 ಸಾವಿರಕ್ಕೂ ಅಧಿಕ ಮಂದಿ ಪ್ರತಿಕ್ರಿಯಿಸಿದ್ದಾರೆ. ಬಾಹುಬಲಿ ಎಡಿಟ್ ಮಾಡಿರುವ ವಿಡಿಯೋ 20 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ. ಇದನ್ನೂ ಓದಿ: ಟ್ರಂಪ್ ಜೊತೆಗೆ ಭಾರತಕ್ಕೆ ಬರುತ್ತಿದೆ ದಿ ಬೀಸ್ಟ್ ಕಾರ್- ಕಾರಿನ ವಿಶೇಷತೆ ಏನು? ಮೈಲೇಜ್ ಎಷ್ಟು?
Enjoy some more for you pic.twitter.com/lW7m2A7WtS
— 𝓓𝓻. 𝓝 𝓟𝓪𝓽𝓮𝓵 (@Hindustanse) February 23, 2020

Leave a Reply