ಕಾರವಾರ: ಮಂಗನಕಾಯಿಲೆಯು ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ ತೆಗೆದುಕೊಂಡಿದೆ. ಜಿಲ್ಲೆಯ ಸಿದ್ದಾಪುರ ತಾಲೂಕಿನ ಕ್ಯಾದಗಿ ಸಮೀಪದ ಗಿಳಸೆ ಗ್ರಾಮದಲ್ಲಿ ಘಟನೆ ನಡೆದಿದೆ.
ಗಿಳಸೆ ಗ್ರಾಮದ ಭಾಸ್ಕರ್ ಗಣಪತಿ ಹೆಗಡೆ (64) ಮೃತ ದುರ್ದೈವಿ. ಕೆಲವು ದಿನಗಳಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಸಿದ್ದಾಪುರದ ಖಾಸಗಿ ಅಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸಿದ ಕಾರಣ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಭಾಸ್ಕರ್ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಏನಿದು ಮಂಗನ ಜ್ವರ? ಕಾಯಿಲೆ ಹೇಗೆ ಬರುತ್ತೆ? ರೋಗ ಲಕ್ಷಣ ಏನು? ಚಿಕಿತ್ಸೆ ಹೇಗೆ- ಇಲ್ಲಿದೆ ಸಂಪೂರ್ಣ ಮಾಹಿತಿ

ಹೇಗೆ ಹರಡುತ್ತದೆ?
ಕ್ಯಾಸನೂರ ಕಾಯಿಲೆ ಮೂಲತಃ ಪ್ರಾಣಿಗಳ ರೋಗವಾಗಿದ್ದು, ಮುಖ್ಯವಾಗಿ ಏಈಆಗಿ ವೈರಾಣು ಇರುವ ಉಣ್ಣಿ ಅಥವಾ ಉಣುಗು (Ticks) ಕಚ್ಚಿದಾಗ ರೋಗಕಾರಕ ವೈರಸ್‍ಗಳನ್ನು ಒಂದು ಪ್ರಾಣಿಯಿಂದ ಇನ್ನೊಂದು ಪ್ರಾಣಿಗೆ ಹರಡುತ್ತದೆ. ಸಾಮಾನ್ಯವಾಗಿ ಈ ರೋಗಗ್ರಸ್ತ ಉಣ್ಣೆಗಳು ಮಾನವನನ್ನು ಕಚ್ಚುವುದರಿಂದ ಆಕಸ್ಮಿಕವಾಗಿ ಮಾನವನಿಗೆ ಸೋಂಕು ತಗಲುತ್ತದೆ. ಆದರೆ ಮಾನವನಿಂದ ಮಾನವನಿಗೆ ಈ ಸೋಂಕು ಹರಡುವುದಿಲ್ಲ. ಇದನ್ನೂ ಓದಿ: ಮಂಗನ ಕಾಯಿಲೆಗೆ ಹೆದರಿ ಊರು ತೊರೆಯುತ್ತಿದ್ದಾರೆ ಮಲೆನಾಡಿಗರು!
ಆರಂಭಗೊಂಡಿದ್ದು ಹೇಗೆ?
ಭಾರತಕ್ಕೆ ಸ್ವಾತಂತ್ರ್ಯ ಬಂದು ಹತ್ತು ವರ್ಷಗಳಾದ ಬಳಿಕ ಅಂದರೆ 1957ರಲ್ಲಿ ಬೇಸಗೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿಗೆ ಸೇರಿದ ಕ್ಯಾಸನೂರು ಗ್ರಾಮದಲ್ಲಿ ಮೊದಲ ಬಾರಿಗೆ ಮಂಗನ ಜ್ವರ ಕಾಣಿಸಿಕೊಂಡಿತ್ತು. ಈ ಕಾಯಿಲೆ ಕಾಡಿನಲ್ಲಿ ಮಂಗಗಳು ಮೃತಪಟ್ಟಾಗ ಅದರಿಂದ ಜನರಿಗೆ ಹರಡುತ್ತಿತ್ತು. ಆದ್ದರಿಂದ ಈ ಕಾಯಿಲೆಗೆ `ಮಂಗನ ಕಾಯಿಲೆ ಎಂದು ಜನ ಕರೆದಿದ್ದರು. ಆದರೆ ವೈದ್ಯ ವಿಜ್ಞಾನಿಗಳು ಪ್ರಪಂಚದಲ್ಲಿ ಎಲ್ಲೂ ಕಾಣದ ಈ ಕಾಯಿಲೆ ಕ್ಯಾಸನೂರು ಗ್ರಾಮದಲ್ಲಿ ಮಾತ್ರ ಕಂಡು ಬಂದಿರುವುದರಿಂದ ಈ ಕಾಯಿಲೆಗೆ `ಕ್ಯಾಸನೂರು ಕಾಡಿನ ಕಾಯಿಲೆ’ ಎಂದು ಕರೆದರು. ಇದನ್ನೂ ಓದಿ: ಕಾರಿನ ಮೇಲೆ ಮಂಗನಕಾಯಿಲೆ ಬೋರ್ಡ್ ಹಾಕಿ ಎಂಟ್ರಿ ಕೊಟ್ಟ ಐಟಿ ಅಧಿಕಾರಿಗಳು


Leave a Reply