ಕೊರೊನಾ ಎಫೆಕ್ಟ್- ಕೆಐಎಎಲ್‍ನಲ್ಲಿ ಹೈ ಅಲರ್ಟ್

ಬೆಂಗಳೂರು: ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುವ ತೆಲಂಗಾಣ ಮೂಲದ ಟೆಕ್ಕಿ ಕೊರೊನಾ ವೈರಸ್‍ಗೆ ತುತ್ತಾಗಿರುವುದು ದೃಢಪಟ್ಟಿರುವ ಬೆನ್ನಲ್ಲೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕೊರೊನಾ ವೈರಸ್ ವಿಶ್ವಾದ್ಯಂತ ಹರಡುತ್ತಿದೆ ಎಂದು ಗೊತ್ತಾದ ದಿನದಿಂದಲೇ ವಿಮಾನ ನಿಲ್ದಾಣದ ಒಳಭಾಗದಲ್ಲಿ ಚೀನಾ ಹಾಗೂ ಕೊರೊನಾ ಹರಡಿದ್ದ ದೇಶಗಳಿಂದ ಆಗಮಿಸುತ್ತಿದ್ದ ಪ್ರಯಾಣಿಕರನ್ನ ಉಷ್ಣ ತಪಾಸಣೆ ನಡೆಸಿ ಹೊರಬಿಡಲಾಗುತ್ತಿತ್ತು. ಆದರೆ ಈಗ ಕೊರೊನಾ ವೈರಸ್ ಯೂರೋಪ್ ರಾಷ್ಟಗಳಿಗೆ ಹರಡಿರುವ ಬೆನ್ನಲ್ಲೇ ಸದ್ಯ 13 ದೇಶಗಳಿಂದ ಆಗಮಿಸುವ ಎಲ್ಲಾ ಪ್ರಯಾಣಿಕರನ್ನ ತಪಾಸಣೆ ಮಾಡಲಾಗುತ್ತಿದೆ. ಇದನ್ನೂ ಓದಿ:  ಆಂಧ್ರದ ಟೆಕ್ಕಿಗೆ ಕೊರೊನಾ : ಬೆಂಗ್ಳೂರಲ್ಲಿ ಲ್ಯಾಂಡ್ ಆಗಿದ್ರೂ ಪತ್ತೆ ಆಗಲಿಲ್ಲ ಯಾಕೆ?

ಮಾಸ್ಕ್ ಧರಿಸಿ ಓಡಾಡುತ್ತಿರುವ ಪ್ರಯಾಣಿಕರು:
ಕೊರೊನಾ ವೈರಸ್ ಚೀನಾದಿಂದ ದಿನದಿಂದ ದಿನಕ್ಕೆ ಇತರೆ ರಾಷ್ಟ್ರಗಳಿಗೆ ವ್ಯಾಪಿಸುತ್ತಿದ್ದು, ಭಾರತಕ್ಕೂ ಕಾಲಿಟ್ಟಿರೋದು ದೃಢವಾಗಿದೆ. ಹೀಗಾಗಿ ರಾಜ್ಯದ ಪ್ರಮುಖವಾಗಿ ವಿಮಾನ ನಿಲ್ದಾಣಗಳಲ್ಲಿ ಅತಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ಅಂತೆಯೇ ಕೆಐಎಎಲ್‍ನಲ್ಲಿ ಸಹ ವಿವಿಧ ದೇಶಗಳಿಂದ ಆಗಮಿಸುತ್ತಿರುವ ಪ್ರಯಾಣಿಕರು ಮಾಸ್ಕ್ ಧರಿಸಿ ಹೊರಬರುತ್ತಿರೋ ದೃಶ್ಯಗಳು ಸರ್ವೆ ಸಾಮಾನ್ಯ ಎಂಬಂತಾಗಿದೆ. ಇದನ್ನೂ ಓದಿ: ಚೀನಾದಲ್ಲಿ 10 ದಿನದಲ್ಲಿ ಆಸ್ಪತ್ರೆ ಕಟ್ಟಿದ್ರು – ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾಗೆ ಪ್ರತ್ಯೇಕ ವಾರ್ಡ್ ಇಲ್ಲ

ಮಾಸ್ಕ್ ಧರಿಸಿ ಕಾರ್ಯ ನಿರ್ವಹಿಸುತ್ತಿರೋ ಸಿಬ್ಬಂದಿ:
ಕೊರೊನಾ ಕಾಟಕ್ಕೆ ವಿಮಾನ ನಿಲ್ದಾಣದ ಭದ್ರತಾ ಹಾಗೂ ಇತರೆ ಸಿಬ್ಬಂದಿ ಸಹ ಮಾಸ್ಕ್ ಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ದಿನದ 24 ಗಂಟೆಯೂ ಸಹ ಕೊರೊನಾ ಪೀಡಿತ 13 ದೇಶಗಳಿಂದ ಆಗಮಿಸುತ್ತಿರುವ ಪ್ರಯಾಣಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಿ ಹೊರಬಿಡಲಾಗ್ತಿದೆ. ಇದನ್ನೂ ಓದಿ: ಬೀ ಕೇರ್ ಫುಲ್: ಕೊರೊನಾ ಲಕ್ಷಣ ಏನು? ಹೇಗೆ ಹರಡುತ್ತದೆ? ಮುಂಜಾಗೃತ ಕ್ರಮ ಏನು?

ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಎಚ್‍ಒ ಮಂಜುಳಾ ಅವರು, 24 ಗಂಟೆಗಳ ಕಾಲ ನಿರಂತರವಾಗಿ ಆರೋಗ್ಯ ಇಲಾಖೆ ಸಿಬ್ಬಂದಿ, ವೈದ್ಯರು ಸೇರಿದಂತೆ ವಿವಾನ ನಿಲ್ದಾಣ ಅಧಿಕಾರಿಗಳು, ಮೆಡಿಕಲ್ ಸ್ಟಾಪ್ ಜೊತೆ ಜಂಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಟೆಕ್ಕಿ ಕೊರೊನಾಗೆ ತುತ್ತಾಗಿರುವ ಪ್ರಕರಣ ಬಿಟ್ಟು ಬೇರೆ ಯಾವ ಸೋಂಕಿತ ಪ್ರಕರಣಗಳು ದೃಢಪಟ್ಟಿಲ್ಲ. ಅನುಮಾನಸ್ಪದ ಪ್ರಕರಣಗಳು ಕಂಡುಬಂದಲ್ಲಿ ಸೂಕ್ತ ಆರೋಗ್ಯ ಚಿಕಿತ್ಸೆ ನೀಡಲು ಸನ್ನದ್ದರಾಗಿದ್ದೇವೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *