ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು: ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿವೆ. ಹೀಗಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಶುಭಕೋರಿದ್ದಾರೆ.

ಯಡಿಯೂರಪ್ಪ ಅವರು ಟ್ವೀಟ್ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಶುಭಾಕೋರಿದ್ದಾರೆ. “ವಿದ್ಯಾರ್ಥಿ ಜೀವನದ ಬಹು ಮುಖ್ಯ ಘಟ್ಟವಾದ ದ್ವಿತೀಯ ಪಿಯು ಅಂತಿಮ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭಾಶಯಗಳು. ನಿಮ್ಮೆಲ್ಲರ ಅಗಣಿತ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿ, ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಾಳೆಯಿಂದ ದ್ವಿತೀಯ ಪಿಯುಸಿ ಎಕ್ಸಾಂ ಪ್ರಾರಂಭ – ಪರೀಕ್ಷೆಗೆ ಟಿಪ್ಸ್

ಈಗಾಗಲೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಜ್ಜಾಗುತ್ತಿದ್ದಾರೆ. ಇದಕ್ಕಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಇರುವಂತಹ ಆತಂಕ ಅನುಮಾನ ಹೋಗಲಾಡಿಸಲು ಮತ್ತು ಅವರಲ್ಲಿ ಇರುವಂತಹ ಅನುಮಾನಗಳಿಗೆ ತೆರೆ ಎಳೆಯಲು ಪದವಿ ಪೂರ್ವ ಶಿಕ್ಷಣ ಇಲಾಖೆ ಹಲವಾರು ಕಾರ್ಯಗಾರ ಮತ್ತು ನೇರ ಪೋನ್ ಇನ್ ಕಾರ್ಯಕ್ರಮಗಳನ್ನ ಕೂಡ ಮಾಡಿದೆ.

ಶಿಕ್ಷಣ ಸಚಿವರು ಕೂಡ ಪರೀಕ್ಷೆಗೆ ಯಾವುದೇ ರೀತಿ ತೊಂದರೆಯಾಗದಂತೆ ನಡೆಸಲು ಸೂಚನೆ ನೀಡಿದ್ದು, ಬುಧವಾರದಿಂದ ಪರೀಕ್ಷೆಗಳು ಪ್ರಾರಂಭವಾಗುತ್ತಿವೆ.

Comments

Leave a Reply

Your email address will not be published. Required fields are marked *